ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು

| Published : Oct 12 2025, 01:00 AM IST

ಸಾರಾಂಶ

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ದಿನ ಬೆಳಗಾದರೆ ಆಡಳಿತ ಪಕ್ಷದ ಶಾಸಕರ ಕಚ್ಚಾಟವನ್ನು ನೋಡುತ್ತಿದ್ದೇವೆ.

ಕನ್ನಡಪ್ರಭ ವಾರ್ತೆ ಮೈಸೂರು

ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಮೈಸೂರು‌ ಜಿಲ್ಲಾ ಸಹಕಾರ ಯೂನಿಯನ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ತಿಳಿಸಿದರು.ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಹೆಚ್ಚಾಗಿದೆ. ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಸರ್ಕಾರ ಹಸ್ತಕ್ಷೇಪ ಮಾಡಿತು. ಆ ಚುನಾವಣೆಯಲ್ಲಿ ಏನಾಯ್ತು ಎಂಬುದು ಇನ್ನೂ ಕೆಲವರಿಗೆ ಗೊತ್ತಿಲ್ಲ. ಆ ಚುನಾವಣೆ ಪ್ರಕ್ರಿಯೆ ಇನ್ನೂ ಮುಗಿದಿಲ್ಲ, ಮುಗಿಯಲು ಸರ್ಕಾರ ಬಿಡುತ್ತಿಲ್ಲ‌. ಸಹಕಾರ ಕ್ಷೇತ್ರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದನ್ನು ಬಿಟ್ಟು, ಸ್ವಾಯತ್ತತೆಯಿಂದ ಕಾರ್ಯ ನಿರ್ವಹಿಸಲು ಬಿಡಬೇಕು. ನಾವು ಮೀಸಲಾತಿ ವಿರೋಧಿಗಳಲ್ಲ ಎಂದರು.ಬಾಲಕಿಗೆ ಕುಟುಂಬಕ್ಕೆ ಪರಿಹಾರ ಕೊಡಿರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ದಿನ ಬೆಳಗಾದರೆ ಆಡಳಿತ ಪಕ್ಷದ ಶಾಸಕರ ಕಚ್ಚಾಟವನ್ನು ನೋಡುತ್ತಿದ್ದೇವೆ. ಅವರವರ ಕಷ್ಟ- ಸುಖಗಳ ಬಗ್ಗೆ ಕಾಂಗ್ರೆಸ್ ಶಾಸಕರು ಬ್ಯುಸಿ ಆಗಿದ್ದಾರೆ. ಜನರ ಸಮಸ್ಯೆಗಳತ್ತ ಯಾರು ಗಮನ ಹರಿಸುತ್ತಿಲ್ಲ ಎಂದು ಅವರು ದೂರಿದರು.ಕಾಂಗ್ರೆಸ್ ಶಾಸಕರ ಡಿನ್ನರ್ ಪಾರ್ಟಿ ಬಗ್ಗೆ ನಮಗೇನು ಗೊತ್ತಿಲ್ಲ. ನಾವು ಜೆಡಿಎಸ್ ಶಾಸಕರು, ಡಿನ್ನರ್ ಪಾರ್ಟಿ ಬಗ್ಗೆ ಕಾಂಗ್ರೆಸ್ ಶಾಸಕರನ್ನೇ ಕೇಳಿ. ಅಧಿಕಾರ ಹಸ್ತಾಂತರದ ಬಗ್ಗೆಯೂ ನಮಗೇನು ಗೊತ್ತಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಶಾಸಕರಲ್ಲೇ ದೊಡ್ಡ ಗೊಂದಲವಿದೆ ಎಂದು ಅವರು ಟೀಕಿಸಿದರು.ಮೈಸೂರಿನಲ್ಲೂ ಕಾನೂನು ಸುವ್ಯವಸ್ಥೆ ಕುಸಿದಿದೆ‌. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಮೈಸೂರಿನಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡೆ ಬೇಸರ ತರಿಸಿದೆ. ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು. ಬೆಳೆ ನಷ್ಟ ಸರ್ವೇ ಮಾಡಿಸಿರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ತ್ವರಿತವಾಗಿ ಸರ್ವೇ ಮಾಡಬೇಕು. ಸಿಎಂ ಸಿದ್ದರಾಮಯ್ಯ ಅವರು ಪ್ರವಾಹ ಪೀಡಿತ ಕಲಬುರಗಿ ಸೇರಿದಂತೆ ಇತರ ಜಿಲ್ಲೆಗಳಿಗೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಆದರೆ ಬೆಳೆ ನಷ್ಟದ ಕುರಿತು ಸರ್ವೇ ಮಾಡಿಸಿಲ್ಲ‌. ಸರ್ವೇ ಮಾಡದೇ ಪರಿಹಾರ ನಿಗದಿ ಮಾಡಲಾಗುವುದಿಲ್ಲ. ಹೀಗಾಗಿ, ಬೆಳೆ ಹಾನಿ ಕುರಿತು ‌ಆದಷ್ಟು ಬೇಗನೆ ಸರ್ವೇ ಕಾರ್ಯ ನಡೆಯಬೇಕು ಎಂದು ಅವರು ಆಗ್ರಹಿಸಿದರು.ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆರೋಗ್ಯ ಇದೀಗ ಸುಧಾರಿಸಿದೆ. ನಾಳೆ ಅಥವಾ ನಾಳಿದ್ದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅವರ ಆರೋಗ್ಯದ ಬಗ್ಗೆ ಯಾರು ಚಿಂತಿಸುವುದು ಬೇಡ ಎಂದು ಅವರು ಹೇಳಿದರು.