ಪರಿಸರ ಸಂವೇದನೆಗೆ ತಿಮ್ಮಕ್ಕ ಅನ್ವರ್ಥ

| Published : Nov 17 2025, 12:15 AM IST

ಪರಿಸರ ಸಂವೇದನೆಗೆ ತಿಮ್ಮಕ್ಕ ಅನ್ವರ್ಥ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕಗೆ ನುಡಿನಮನ ಸಲ್ಲಿಸಲಾಯಿತು.

ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕಗೆ ನುಡಿನಮನ ಸಲ್ಲಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ಮಾತನಾಡಿ, ಸಾಲುಮರದ ತಿಮ್ಮಕ್ಕ ಸಸಿಗಳನ್ನು ಮಕ್ಕಳಂತೆ ಬೆಳೆಸಿ ಪೋಷಿಸಿದರು. ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿರುವ ಸಾಧನೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸಾಲು ಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆಯ ಸಂದೇಶ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಸಾಲುಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆ, ದೃಢತೆ, ಮತ್ತು ಬದ್ಧತೆಯನ್ನು ಜನರು ಎಂದಿಗೂ ಮರೆಯುವುದಿಲ್ಲ ಎಂದರು.

ಸಾಲುಮರದ ತಿಮ್ಮಕ್ಕ ಅವರ ಪರಿಸರ ಸೇವೆ ಗೌರವಿಸಿ ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಪದ್ಮಶ್ರೀ, ಕರ್ನಾಟಕ ರಾಜ್ಯೋತ್ಸವ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ‌ಕರ್ನಾಟಕ ಸರ್ಕಾರದಿಂದ ''''''''ಪರಿಸರ ರಾಯಭಾರಿ''''''''ಯಾಗಿ ಅವರು ನೇಮಕವಾಗಿದ್ದರು. ಸಾಲು ಮರದ ತಿಮ್ಮಕ್ಕ ಹೆಸರಲ್ಲಿ ಪರಿಸರ ಉಳಿಸಿ, ಬೆಳೆಸಿ, ಸಂರಕ್ಷಣೆ ಮಾಡುವ ಹಲವು ಯೋಜನೆಗಳನ್ನು ಸರ್ಕಾರ ಮತ್ತು ಸಾರ್ವಜನಿಕರು ಮಾಡಬೇಕಾಗಿದೆ ಎಂದರು.

ನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್‌ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಟ್ರಸ್ಟಿ ಸುಲೋಚನಾ ವೆಂಕಟರೆಡ್ಡಿ, ಕನ್ನಡ ಪಕ್ಷದ ಸಂಜೀವನಾಯಕ್, ದಲಿತ ಮುಖಂಡ ಗುರುರಾಜಪ್ಪ, ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷರಾದ ಡಿ.ಶ್ರೀಕಾಂತ್, ಪ್ರಮೀಳಾ ಮಹಾದೇವ್, ಮುಖಂಡರಾದ ಸಾ.ಲ.ಕಮಲನಾಥ್, ಜಿ.ಸುರೇಶ್, ನಾಗರತ್ನಮ್ಮ, ಸಿ.ಅಣ್ಣಯ್ಯ, ಶ್ರೀನಿವಾಸಲು, ಎಂ.ಸಿ.ಮಂಜುನಾಥ್, ಶ್ರೀನಿವಾಸ್ ಭಾಗವಹಿಸಿದ್ದರು.

16ಕೆಡಿಬಿಪಿ1- ದೊಡ್ಡಬಳ್ಳಾಪುರದ ಕಸಾಪ ಮತ್ತು ಕಜಾಪ ನೇತೃತ್ವದಲ್ಲಿ ಸಾಲು ಮರದ ತಿಮ್ಮಕ್ಕ ನುಡಿನಮನ ಕಾರ್ಯಕ್ರಮ ನಡೆಯಿತು.