ಕದಾಳು ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ತಿಮ್ಮೇಗೌಡ ಅವಿರೋಧ ಆಯ್ಕೆ

| Published : Dec 05 2024, 12:31 AM IST

ಕದಾಳು ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ತಿಮ್ಮೇಗೌಡ ಅವಿರೋಧ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಆಲೂರು ತಾಲೂಕಿನ ಕದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ತುರುಗನಹಳ್ಳಿ ಗ್ರಾಮದ ತಿಮ್ಮೇಗೌಡ (ಕಾಂತರಾಜು) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷ ಶಾಂತಮಲ್ಲಪ್ಪ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ತಿಮ್ಮಗೌಡ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪಕ್ಷಭೇದ ಮರೆತು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಆಲೂರು

ತಾಲೂಕಿನ ಕದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ತುರುಗನಹಳ್ಳಿ ಗ್ರಾಮದ ತಿಮ್ಮೇಗೌಡ (ಕಾಂತರಾಜು) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷ ಶಾಂತಮಲ್ಲಪ್ಪ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ತಿಮ್ಮಗೌಡ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ್ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿ ತಿಮ್ಮೇಗೌಡ ಅವರಿಗೆ ಅಧಿಕಾರ ವಹಿಸಿಕೊಟ್ಟರು. ನೂತನ ಅಧ್ಯಕ್ಷ ತಿಮೇಗೌಡ ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಶಾಂತಮಲ್ಲಪ್ಪ, ಉಪಾಧ್ಯಕ್ಷ ಶ್ವೇತಾ ಎನ್ ಸೇರಿದಂತೆ 13 ಮಂದಿ ಸದಸ್ಯರು ಹಾಜರಿದ್ದರು. ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕೆ. ಎಸ್. ಮಂಜೇಗೌಡ,ಹಾಸನ ಜಿಲ್ಲಾ ಹೆಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್,ಬಿಜೆಪಿ ಮುಖಂಡ ಕದಾಳು ಲೋಕೇಶ್, ರಾಜಪ್ಪಗೌಡ,ಸೇರಿದಂತೆ ಹಲವು ಗಣ್ಯರು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪಕ್ಷಭೇದ ಮರೆತು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್, ಕಾರ್ಯದರ್ಶಿ ದಿಲೀಪ್ ಕುಮಾರ್ ಹಾಗೂ ಕಂದಾಯ ನಿರೀಕ್ಷಕ ಕೃಷ್ಣಪ್ಪ, ತಾಲೂಕು ಪಂಚಾಯಿತಿ ಸದಸ್ಯ ಸುಬ್ರಮಣಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.