ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಬಜೆಟ್ ಸಾಮಾನ್ಯ ಜನತೆಗೆ ಬರೆ ಎಳೆದಂತಿದೆ, ಈ ಬಜೆಟ್ ಕೇವಲ ಒಂದು ವರ್ಗಕ್ಕೆ ಸೀಮಿತವಾದಂತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮೈಸೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಬಜೆಟ್ ಸಾಮಾನ್ಯ ಜನತೆಗೆ ಬರೆ ಎಳೆದಂತಿದೆ, ಈ ಬಜೆಟ್ ಕೇವಲ ಒಂದು ವರ್ಗಕ್ಕೆ ಸೀಮಿತವಾದಂತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಹೇಳಿದ್ದಾರೆ. ಕರ್ನಾಟಕ ಬಜೆಟ್ ಅನ್ನು ಇಸ್ಲಾಮೀಕರಣಗೊಳಿಸಿರುವ ಸಿಎಂ ಸಿದ್ದರಾಮಯ್ಯ ಅವರೇ, ಬಜೆಟ್ಟಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳಿಗೆ ನೀವು ಕೊಟ್ಟಿರುವುದು ಕೇವಲ ಚಿಪ್ಪು ಮಾತ್ರ ಎಂದು ಅವರು ಟೀಕಿಸಿದ್ದಾರೆ. ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ಕಾಂಗ್ರೆಸ್ ನ ದಿವಾಳಿ ಮಾಡೆಲ್ ಜಾರಿ ಆಗುತ್ತಿದೆ. ತಾವು ಘೋಷಿಸಿರುವ ಹೊಸ ಕಾರ್ಯಕ್ರಮಗಳಿಗೆ ಹಾಗೂ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಸಂಪನ್ಮೂಲ ಕ್ರೋಡೀಕರಣದ ಮೂಲಗಳನ್ನು ಸ್ಪಷ್ಟವಾಗಿ ಎಲ್ಲಿಯೂ ವಿವರಿಸಿಲ್ಲ, ಅ ಮೂಲಕ ಇದೊಂದು ತೋರಿಕೆಯ ಹಾಗೂ ಜನರ ಕಿವಿಗೆ ಹೂ ಮುಡಿಸುವ ಬಜೆಟ್ ಆಗಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.