ಸಾರಾಂಶ
ಚಡಚಣ: ಇದು ನನ್ನ ಕೊನೆಯ ಚುನಾವಣೆ, ಇದೊಂದು ಬಾರಿ ನನ್ನನ್ನು ಆಶೀರ್ವದಿಸಿ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು. ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಸಂಜೆ ನಡೆದ ಪ್ರಚಾರ ಸಭೆ ಹಾಗೂ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಸುಮಾರು 42 ವರ್ಷ ನನ್ನ ರಾಜಕೀಯ ಜೀವನ ಆರಂಭಗೊಂಡಿದ್ದು ಈ ಭಾಗದಿಂದಲೇ. ಮನೆ ಮಗನಂತೆ ನನ್ನನ್ನು ಬೆಳಿಸಿದ ತಮಗೆ ಚಿರ ಋಣಿಯಾಗಿದ್ದೇನೆ ಎಂದರು.
ಚಡಚಣ: ಇದು ನನ್ನ ಕೊನೆಯ ಚುನಾವಣೆ, ಇದೊಂದು ಬಾರಿ ನನ್ನನ್ನು ಆಶೀರ್ವದಿಸಿ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.
ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಸಂಜೆ ನಡೆದ ಪ್ರಚಾರ ಸಭೆ ಹಾಗೂ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಸುಮಾರು 42 ವರ್ಷ ನನ್ನ ರಾಜಕೀಯ ಜೀವನ ಆರಂಭಗೊಂಡಿದ್ದು ಈ ಭಾಗದಿಂದಲೇ. ಮನೆ ಮಗನಂತೆ ನನ್ನನ್ನು ಬೆಳಿಸಿದ ತಮಗೆ ಚಿರ ಋಣಿಯಾಗಿದ್ದೇನೆ ಎಂದರು.ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ(ಕುಚಬಾಳ) ಮಾತನಾಡಿ, ದೇಶ ವಾಸಿಗಳಿಗೆ ಅಭದ್ರತೆ, ಭಯೋತ್ಪಾದನೆ, ಬಡತನ ಕಾಂಗ್ರೆಸ್ ನಾಯಕರು ನೀಡಿದ ಕೊಡುಗೆಗಳಾಗಿವೆ. ಕಾಂಗ್ರೆಸ್ ಪಕ್ಷದಲ್ಲಿ ಸಮರ್ಥ ನಾಯಕರಿಲ್ಲ. ವಿಶ್ವ ನಾಯಕರಾಗಿರುವ ಮೋದಿ ಅವರನ್ನು ಬೆಂಬಲಿಸಿ, ಸುಭದ್ರ ಸರ್ಕಾರ ರಚನೆಗೆ ಮತ್ತೊಮ್ಮೆ ಬಿಜೆಪಿ ಗೆಲ್ಲಿಸಲು ಪಣ ತೋಡಬೇಕಾಗಿದೆ ಎಂದರು.
ಈ ವೇಳೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಜಿಪಂ ಮಾಜಿ ಉಪಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ, ಜಿಪಂ ಮಾಜಿ ಸದಸ್ಯ ಭೀಮಾಶಂಕರ ಬಿರಾದಾರ, ಮುಖಂಡ ಸಂಜೀವ ಐಹೊಳ್ಳಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಚಡಚಣ ಮಂಡಳ ಅಧ್ಯಕ್ಷ ಕಾಂತುಗೌಡ ಪಾಟೀಲ, ಯುವ ಮೋರ್ಚಾ ಅಧ್ಯಕ್ಷ ಕೇದಾರಿ ಸಾಳುಂಕೆ, ಪ್ರಧಾನ ಕಾರ್ಯದರ್ಶಿ ಪ್ರಮೋದ ಮಠ, ವಿಭಾಗೀಯ ಸಂಚಾಲಕ ಪ್ರಕಾಶ ಅಕ್ಕಲಕೋಟ, ಜಿಲ್ಲಾ ಉಪಾಧ್ಯಕ್ಷ ಎಸ್.ಜೆ.ಪಾಟೀಲ ಸೇರಿದಂತೆ ಚಡಚಣ ಪಟ್ಟಣ ಪಂಚಾಯಿತಿ ಸದಸ್ಯರು, ಮಂಡಳ ಬಿಜೆಪಿ ವಿವಿಧ ಹಂತಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.