ಸಾರಾಂಶ
ಮುಕುಂದ ರಾವಂದೂರು
ಕನ್ನಡಪ್ರಭ ವಾರ್ತ ರಾವಂದೂರುಶತಾಯಗತಾಯ ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಪಿರಿಯಾಪಟ್ಟಣ ತಾಲೂಕು ಪ್ರಥಮ ಸ್ಥಾನ ಗಳಿಸಲು ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿದಿದ್ದು. ಇದಕ್ಕೂ ಮೊದಲು ಕಳೆದ 9 ವರ್ಷಗಳಿಂದ ಪ್ರಥಮ ಸ್ಥಾನದಲ್ಲಿತ್ತು.
ಈ ಬಾರಿ ವಿಷಯವಾರು ಶಿಕ್ಷಕರಿಗೆ ಉತ್ತಮ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಹೆಚ್ಚು ನಿಗಾವಹಿಸುವ ಹಿನ್ನೆಲೆ ಹಲವಾರು ತರಬೇತಿಗಳನ್ನು ನೀಡಲಾಗಿದೆ ಹಾಗೂ ಒಬ್ಬೊಬ್ಬ ಶಿಕ್ಷಕರಿಗೂ ಇಂತಿಷ್ಟು ಮಕ್ಕಳು ಎಂದು ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ದತ್ತು ನೀಡಿ ಆ ಮಕ್ಕಳ ಶೈಕ್ಷಣಿಕ ಜವಾಬ್ದಾರಿಯನ್ನು ಶಿಕ್ಷಕರಿಗೆ ನೀಡಲಾಗಿದ್ದು, ಆ ಶಿಕ್ಷಕರು ಆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಉತ್ತೇಜನ ನೀಡುತ್ತಿದ್ದಾರೆ. ಹಾಗೂ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಸಹ ನೀಡಲಾಗುತ್ತಿದೆ.ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿಗಳ ಗುಂಪಿಗೆ ಸೇರಿಸಿ ಗುಂಪು ಓದುವಿಕೆಯಿಂದ ಅವರನ್ನು ಸಹ ಶೈಕ್ಷಣಿಕವಾಗಿ ಮುಂದೆ ತರಲು ಪ್ರಯತ್ನ ನಡೆಸುತ್ತಿದ್ದಾರೆ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆ ಭೇಟಿ, ರಾತ್ರಿ ಪಾಠ ಇನ್ನು ಮುಂತಾದ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಸ್ವತಃ ವಿಷಯವಾರು ಶಿಕ್ಷಕರಿಂದ ಪ್ರಶ್ನೆ ಪತ್ರಿಕೆ ತಯಾರಿಸಿ ಮೂರು ಬಾರಿ ಪರೀಕ್ಷೆಯ ಪೂರ್ವಭಾವಿ ತರಬೇತಿ ಪರೀಕ್ಷೆಯನ್ನು ಸಹ ನಡೆಸಲಾಗಿದೆ. ತಾಲೂಕಿನಲ್ಲಿ ಒಟ್ಟು 3,145 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ತಾಲೂಕಿನಲ್ಲಿ ಒಟ್ಟು 12 ಪರೀಕ್ಷೆ ಕೇಂದ್ರಗಳಿವೆ.
ಈಗಾಗಲೇ ತಹಸೀಲ್ದಾರ್ ನೇತೃತ್ವದಲ್ಲಿ ಎಲ್ಲ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಭೆ ನಡೆಸಲಾಗಿದೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ಅತಿ ಹೆಚ್ಚು ಫಲಿತಾಂಶ ಈ ಬಾರಿ ಬರುವ ನಿರೀಕ್ಷೆಯಲ್ಲಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಶ್ರಮದ ಫಲವಾಗಿ ಮತ್ತೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶತಾಯ ಗತಾಯವಾಗಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸುತ್ತೇವೆ.- ರವಿಪ್ರಸನ್ನ. ಕ್ಷೇತ್ರ ಶಿಕ್ಷಣಾಧಿಕಾರಿ ಗ್ರಾಮೀಣ ವಿದ್ಯಾರ್ಥಿಗಳ ತಮ್ಮ ಭವಿಷ್ಯದ ಬುನಾದಿಯಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ಬರುವ ವಿಶ್ವಾಸವಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಶ್ರಮ ಬಹಳ ಮುಖ್ಯವಾಗಿದೆ.
- ಕೆ. ವೆಂಕಟೇಶ್, ಸಚಿವರು, ಪಿರಿಯಾಪಟ್ಟಣ;Resize=(128,128))
;Resize=(128,128))