ಈ ಬಾರಿಯೂ ಸುರೇಶ್ ಗೆಲವು ಖಚಿತ

| Published : Mar 29 2024, 12:48 AM IST

ಸಾರಾಂಶ

ಚನ್ನಪಟ್ಟಣ: ಕ್ರಿಯಾಶೀಲ ಸಂಸದರೆನಿಸಿರುವ ಸಂಸದ ಡಿ.ಕೆ.ಸುರೇಶ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲವು ಸಾಧಿಸಲಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿರುವ ಜನ ಈ ಬಾರಿಯೂ ಅವರನ್ನು ಬಹುಮತಗಳಿಂದ ಗೆಲ್ಲಿಸಲಿದ್ದಾರೆ ಎಂದು ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ರಾಮನಗರದಲ್ಲಿ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳುವ ಮುನ್ನ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಈ ಬಾರಿ ಚುನಾವಣೆಯಲ್ಲಿ ಸಹ ಜನ ಸುರೇಶ್ ಅವರನ್ನು ಬೆಂಬಲಿಸಲಿದ್ದಾರೆ. ಸುರೇಶ್ ಅವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ತಾಲೂಕಿನಿಂದ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್‍ಯಾಲಿ ಮೂಲಕ ರಾಮನಗರಕ್ಕೆ ತೆರಳುತ್ತಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಮುಖಂಡ ಎಂ.ಸಿ.ಕರಿಯಪ್ಪ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪ್ರಮೋದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್, ಮುಖಂಡರಾದ ಪಿ.ಡಿ.ರಾಜು, ಕೋಕಿಲರಾಣಿ ಮತ್ತಿತರರು ಹಾಜರಿದ್ದರು.ಪೋಟೊ೨೮ಸಿಪಿಟಿ೩:

ತಾಲೂಕಿನ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಮುಖಂಡರು.