ಹೊಸಪೇಟೆ: ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ. 18ರಿಂದ ಏ. 2ರ ವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಜಯನಗರ ಜಿಲ್ಲೆಯು ಕಳೆದ ವರ್ಷ ರಾಜ್ಯಮಟ್ಟದಲ್ಲಿ 18ನೇ ಸ್ಥಾನ ಪಡೆದುಕೊಂಡಿತ್ತು. ಶೇ. 66.62ರಷ್ಟು ಫಲಿತಾಂಶವನ್ನು ಪಡೆದುಕೊಂಡಿತ್ತು. ಇದು ಕಲಬುರಗಿ ವಿಭಾಗದಲ್ಲಿ ಪ್ರಥಮ ಸ್ಥಾನ ಹೊಂದಿತ್ತು. ಈ ವರ್ಷ ಎಸ್ಎಸ್‌ಎಲ್‌ಸಿ ಫಲಿತಾಂಶವನ್ನು ರಾಜ್ಯಮಟ್ಟದಲ್ಲಿ 10-12 ಸ್ಥಾನಕ್ಕೆ ಬರಲು ಪಣತೊಟ್ಟಿದೆ. ಈ ಕುರಿತು ಶಿಕ್ಷಣ ಇಲಾಖೆ ಈಗಾಗಲೇ ವಿದ್ಯಾರ್ಥಿಗಳಿಗೆ ಭರ್ಜರಿ ತಯಾರಿ ನಡೆಸಿ ಅನೇಕ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 22047 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಒಟ್ಟು 73 ಕೇಂದ್ರಗಳ 954 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಹೊಸಪೇಟೆ ತಾಲೂಕಿನಲ್ಲಿ 20, ಕೂಡ್ಲಿಗಿ ತಾಲೂಕಿನಲ್ಲಿ 19, ಹರಪನಹಳ್ಳಿ ತಾಲೂಕಿನಲ್ಲಿ 13, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 12, ಹೂವಿನಹಡಗಲಿ ತಾಲೂಕಿನಲ್ಲಿ 9 ಸೇರಿ ಒಟ್ಟು ಜಿಲ್ಲೆಯಲ್ಲಿ 73 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. 19 ಮಾರ್ಗಗಳಿಗೆ ರೂಟ್ ಆಫೀಸರ್ಸ್, 73 ಮುಖ್ಯ ಅಧೀಕ್ಷಕರು, 73 ಪ್ರಶ್ನೆ ಪತ್ರಿಕೆ ಪಾಲಕರು ಹಾಗೂ ನಾನಾ ಹಂತದ ಅಧಿಕಾರಿಗಳು ಸೇರಿದಂತೆ 980 ಸಿಬ್ಬಂದಿ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.ಹಗರಿಬೊಮ್ಮನಹಳ್ಳಿ ತಾಲೂಕಿನ 12ಕೇಂದ್ರಗಳಲ್ಲಿ ಪರೀಕ್ಷೆಹಗರಿಬೊಮ್ಮನಹಳ್ಳಿ: ಸುಗಮವಾಗಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ತಾಲೂಕು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದ್ದು. ಕೊನೆಯ ಹಂತದ ತಯಾರಿ ಪೂರ್ಣಗೊಳಿಸಿದೆ. ಪಟ್ಟಣದ ನಾಲ್ಕು ಸೇರಿ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ 2935 (1387 ಬಾಲಕರು ಹಾಗೂ 1548 ಬಾಲಕಿಯರು) ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಪ್ರಭಾಕರ್ ಈ ಕುರಿತು ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮ ಪಡಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೂರ್ವಭಾವಿಯಾಗಿ ಪ್ರತಿ ವಿಷಯಕ್ಕೂ ನಾಲ್ಕು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವ ಜೊತೆಗೆ ಮೂರು ಬಾರಿ ಪೂರ್ವಭಾವಿ ಸಿದ್ಧತಾ ಪರೀಕ್ಷೆ ನಡೆಸಲಾಗಿದೆ. ವಿದ್ಯಾರ್ಥಿಗಳು ಅನಗತ್ಯ ಗೊಂದಲಕ್ಕೊಳಗಾಗದೇ ಭಯವಿಲ್ಲದೇ ಅಂತಿಮ ಪರೀಕ್ಷೆ ಬರೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಿರುಗುಪ್ಪ: 14ಕೇಂದ್ರ 180 ಕೊಠಡಿಗಳಲ್ಲಿ ಪರೀಕ್ಷೆಸಿರುಗುಪ್ಪ ತಾಲೂಕಿನಾದ್ಯಂತ ಮಾ.18ರಿಂದ ಏಪ್ರಿಲ್ 2ರ ವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸಲು ಸಕಲ ಸಿದ್ಧತೆ ಕೈಗೊಂಡಿದೆ. ನಗರ ಸೇರಿದಂತೆ ತಾಲೂಕಿನಲ್ಲಿ ಪರೀಕ್ಷೆಗೆ 14 ಕೇಂದ್ರಗಳು, 180 ಕೊಠಡಿಗಳನ್ನು ಗುರುತಿಸಲಾಗಿದೆ. ಒಟ್ಟು 4324 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಿಇಒ ಗುರಪ್ಪ, ಶಿಕ್ಷಣ ಸಂಯೋಜಕ ಸುರೇಶ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಕಲ ಸಿದ್ದತೆ ಮಾಡಿದ್ದಾರೆ.ತಂಬ್ರಹಳ್ಳಿಯಲ್ಲಿ ಪರೀಕ್ಷೆಗೆ ಸಕಲ ಸಿದ್ಧತೆಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಕೆಪಿಜಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರದಲ್ಲಿ ಒಟ್ಟು 364 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇದರಲ್ಲಿ 188 ಬಾಲಕರು, 176 ಬಾಲಕಿಯರಿದ್ದಾರೆ. ಕೆಪಿಜಿ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ ಬನ್ನಿಗೋಳ, ಸರ್ಕಾರಿ ಪ್ರೌಢಶಾಲೆ ತೆಲಿಗೋಳಿ, ಸರ್ಕಾರಿ ಪ್ರೌಢಶಾಲೆ ಬಸರಕೋಡ, ಮಾಂತೇಶ್ ಕೌಮುದಿ ಪ್ರೌಢಶಾಲೆ ಬಾಚಿಗೊಂಡನಹಳ್ಳಿ ಸೇರಿದಂತೆ 5 ಶಾಲೆಗಳಿಂದ ಒಟ್ಟು 364 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪರೀಕ್ಷೆ ಅಧೀಕ್ಷಕ ಈಶ್ವರ ನಾಯ್ಕ್ ತಿಳಿಸಿದ್ದಾರೆ.ಈ ಬಾರಿ 10-13ನೇ ಸ್ಥಾನದ ಮೇಲೆ ವಿಜಯನಗರ ಕಣ್ಣು
ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ. 18ರಿಂದ ಏ. 2ರ ವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.