ಸಾರಾಂಶ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಮಹಿಳಾ ಕಾರ್ಯಕಾರಿ ಸಮಿತಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಮಹಿಳೆಯರು ಸಂಘಟಿತರಾಗುವ ಜೊತೆಗೆ ಮಹಿಳೆಯರ ವಿರುದ್ಧ ನಡೆಯುವ ಶೋಷಣೆಗಳನ್ನು ವಿರೋಧಿಸಬೇಕು. ಮಹಿಳೆಯರ ಹಕ್ಕುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಮೂಲ್ಕಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ರೇಷ್ಮಾ ಹಳೆಯಂಗಡಿ ಹೇಳಿದ್ದಾರೆ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಮಹಿಳಾ ಕಾರ್ಯಕಾರಿ ಸಮಿತಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಸ್ಥೆಯ ಸಭಾಂಗಣದಲ್ಲಿ ಜರಗಿದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಮಂಡಳಿ ಕಾರ್ಯಾಧ್ಯಕ್ಷೆ ಯಶೋದಾ ದೇವಾಡಿಗ ಸ್ವಾಗತಿಸಿದರು.ಮಹಿಳಾ ಪೌರ ಕಾರ್ಮಿಕರಾದ ಶ್ವೇತಾ, ಗೀತಾ, ಯಶೋದಾ, ಸುಂದರಿ ಹಾಗೂ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದಲ್ಲಿ ಸುಮಾರು 45 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸುಮತಿ ದೇವಾಡಿಗ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ ತಾಲೂಕು ಶಾಂಭವಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಭಾನುಮತಿ ಶೆಟ್ಟಿ ವಹಿಸಿದ್ದರು.ಸಂಸ್ಥೆಯ ಅಧ್ಯಕ್ಷ ದೀಪಕ್ ಸುವರ್ಣ, ಮಹಿಳಾ ಮಂಡಳಿ ಕಾರ್ಯಾಧ್ಯಕ್ಷೆ ಯಶೋದಾ ದೇವಾಡಿಗ, ಮೂಲ್ಕಿ ತಾಲೂಕು ಶಾಂಭವಿ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಗೀತಾ ಗಣೇಶ್, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಸುನಿಲ್ ದೇವಾಡಿಗ, ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ, ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ, ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸದಸ್ಯೆಯರು ಉಪಸ್ಥಿತರಿದ್ದರು.
ಮಹಿಳಾ ಮಂಡಳಿ ಕಾರ್ಯಾಧ್ಯಕ್ಷೆ ಯಶೋದಾ ದೇವಾಡಿಗ ಸ್ವಾಗತಿಸಿದರು. ಸಾಂಸ್ಕೃತಿಕ ಸಮಿತಿಯ ಜೊತೆ ಕಾರ್ಯದರ್ಶಿ ನೀಮಾ ಸನಿಲ್ ವಂದಿಸಿದರು. ಮಹಿಳಾ ಸದಸ್ಯೆ ವಾಣಿ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.