ಸಾರಾಂಶ
ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಹೆಚ್ಚು ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯುವ ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಪಿಗಳಿಗೆ ಗಲ್ಲಿಗೇರಿಸುವ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಶಾಸಕ ಸಿ ಎನ್ ಬಾಲಕೃಷ್ಣ ಒತ್ತಾಯಿಸಿದರು.ಹೋಬಳಿ ಕೇಂದ್ರ ಕರ್ನಾಟಕ ಪಬ್ಲಿಕ್ ಶಾಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಅವರಣದಲ್ಲಿ ನುಗ್ಗೇಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೆಚ್ಚು ಮೊಬೈಲ್ ಬಳಕೆಯಿಂದಲೂ ಇತ್ತೀಚಿನ ವರ್ಷಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಲು ಮುಖ್ಯ ಕಾರಣವಾಗಿದೆ. ಈ ಬಗ್ಗೆ ಮಕ್ಕಳ ಪೋಷಕರು ತಮ್ಮ ಮಗುವಿನ ಚಲನವಲನಗಳ ಬಗ್ಗೆ ಹೆಚ್ಚು ಗಮನಹರಿಸುವಂತೆ ತಿಳಿಸಿದರು.ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸುವುದರಿಂದ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಉತ್ತಮ ವೇದಿಕೆಯಾಗಿದೆ. ಶಿಕ್ಷಕರು ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳ ಜೊತೆಗೆ ಕಲೆ, ಸಾಹಿತ್ಯ, ಕ್ರೀಡೆ, ಜನಪದ ಕಲೆಗಳ ಬಗ್ಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಇದರಿಂದ ಅವರು ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಸುಮಾರು 2 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಸದ್ಯದಲ್ಲೇ ನೂತನ ಕಟ್ಟಡವನ್ನು ಉದ್ಘಾಟಿಸಲಾಗುತ್ತದೆ. ಇದರ ಜೊತೆಗೆ ಹೋಬಳಿ ಕೇಂದ್ರದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ10 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಹೋಬಳಿ ಕೇಂದ್ರದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವುದಾಗಿ ತಿಳಿಸಿದರು.ಸಿಆರ್‌ಪಿ ಸಂಘದ ಅಧ್ಯಕ್ಷ ಎಚ್ ಟಿ ಮಂಜೇಗೌಡ ಮಾತನಾಡಿ, ಶಾಸಕರು ಸರ್ಕಾರಿ ಶಾಲೆಗಳ ಉನ್ನತಿಗೆ ಹೆಚ್ಚು ಶ್ರಮವಹಿಸುತ್ತಿದ್ದಾರೆ. ಇದರ ಜೊತೆಗೆ ಶಿಕ್ಷಕರ ಸಮಸ್ಯೆಗಳಿಗೂ ಸ್ಪಂದಿಸುತ್ತಿದ್ದಾರೆ ಎಂದರು. ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಸ್ಪರ್ಧಿಗಳ ಭಾಗವಹಿಸಿದ ಮಕ್ಕಳು ವಿವಿಧ ವೇಷ ಧರಿಸುವ ಮೂಲಕ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ನಾಗರಿಕ ವೇದಿಕೆ ಅಧ್ಯಕ್ಷ ತೋಟಿ ನಾಗರಾಜ್, ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ದೊರೆಸ್ವಾಮಿ, ಕೃಷಿ ಪತ್ತಿನ ನಿರ್ದೇಶಕ ಹುಲಿಕೆರೆ ಸಂಪತ್ ಕುಮಾರ್, ಮುಖಂಡರಾದ ಮಹಮ್ಮದ್ ಜಾವೀದ್, ಸುಹೀಲ್, ವಿಎನ್ ಮಂಜುನಾಥ್, ಸಿಆರ್‌ಪಿ ಅಶೋಕ್ ಸುಂದರ್, ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜುನಾಥ್, ಸೇರಿದಂತೆ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಎಸ್‌ಡಿಎಂಸಿ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸಹ ಶಿಕ್ಷಕರು ಹಾಜರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))