ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ: ಡಾ.ಅಶೋಕ್

| Published : Jun 24 2024, 01:33 AM IST

ಸಾರಾಂಶ

ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಯಶೋ ಮಾಧ್ಯಮ - 2024 ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕಲ್ಯಾಣಪುರ

ನಾವು ಕನ್ನಡ ಮಾಧ್ಯಮದವರು ಎನ್ನಲು ಯಾವುದೇ ಅಳುಕು ಬೇಡ. ಕನ್ನಡ ಮಾಧ್ಯಮದಲ್ಲಿ ಓದಿದವರು ಇಂದು ಸರ್ವಾಂತರ್ಯಾಮಿಯಾಗಿದ್ದಾರೆ ಎಂದು ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ಅಶೋಕ್ ಹೇಳಿದರು.

ಅವರು ಇಲ್ಲಿನ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಯಶೋ ಮಾಧ್ಯಮ - 2024 ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದ, ದೇಶದ ಮಾತ್ರವಲ್ಲ ಹೊರ ದೇಶಗಳಲ್ಲಿಯೂ ಉನ್ನತ ಹುದ್ದೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಕೆಲಸ ಮಾಡುತ್ತಿದ್ದಾರೆ ಎಂದವರು ಹೇಳಿದರು.

ಹಿರಿಯ ಪತ್ರಕರ್ತ ಜನಾರ್ದನ್ ಕೊಡವೂರು ಮಾತನಾಡಿ, ಸ್ಪಂದನಾ ಸೇವಾ ಸಂಸ್ಥೆಯ ಪದಾಧಿಕಾರಿಗಳಲ್ಲಿ ಅಧ್ಯಕ್ಷ ವೆಂಕಟೇಶ್ ಪೈ, ಕಾರ್ಯದರ್ಶಿ ಸಂತೋಷ್ ಕಾಮತ್, ಖಜಾಂಚಿ ರಜನಿ ವಿ. ಪೈ, ಸಹ ಕಾರ್ಯದರ್ಶಿಗಳಾದ ಶಿವಾನಂದ ಕಾಮತ್ ನಾಲ್ಕು ಜನರು ಇದೇ ಶಾಲೆಯಲ್ಲಿ ಓದಿದ್ದಾರೆ. ಅವರು ಓದಿದ ಈ ಶಾಲೆಗೆ ಪ್ರತಿ ವರ್ಷ ಉಚಿತವಾಗಿ ನೋಟ್ ಪುಸ್ತಕ ನೀಡುತ್ತಿರುವುದು ಸಮಾಜಮುಖಿ ಕೆಲಸವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಯಶೋ ಮಾಧ್ಯಮ-2024 ಪ್ರಶಸ್ತಿ ಪುರಸ್ಕೃತರಾದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.

ಮಣಿಪಾಲ ಕಾಲೇಜು ಆಫ್ ನರ್ಸಿಂಗ್‌ನ ಸಹಾಯಕ ಪ್ರಾಧ್ಯಾಪಕರಾದ ಡಾ. ಮರಿಯಾ ಪಾಯಸ್, ಸ್ಪಂದನ ಸೇವಾ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪೈ, ಕಾರ್ಯದರ್ಶಿ ಸಂತೋಷ್ ಕಾಮತ್, ಖಜಾಂಚಿ ರಜನಿ.ವಿ. ಪೈ, ಶಾಲಾಡಳಿತ ಮಂಡಳಿಯ ಪ್ರಕಾಶ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಸಂತೋಷ ಶೆಟ್ಟಿ ಉಪಸ್ಥಿತರಿದ್ದರು.