ಕನ್ನಡಪ್ರಭ ವಾರ್ತೆ ಗೌರಿಬಿದನೂರು

ಮತ ಚೋರಿ ಎಂದು ಆರೋಪ ಮಾಡುತ್ತಿರುವ ಕಾಂಗ್ರೆಸ್‌ನವರೇ ನಿಜವಾದ ಮತ ಚೋರಿಯ ಕೆಲಸ ಮಾಡುತ್ತಾ ಬಂದಿದ್ದಾರೆ. ಕೇರಳದಿಂದ ಬಂದವರಿಗೂ ಮತದಾನದ ಹಕ್ಕನ್ನು ನೀಡಿದ್ದು ಅವರು ಎರಡೂ ಕಡೆ ಮತದಾನ ಮಾಡುತ್ತಿದ್ದಾರೆ. ಆ ಮೂಲಕ ರಾಜ್ಯ, ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದು ಬಿಜೆಪಿ ರಾಜ್ಯ ಸಂಚಾಲಕ ಜಗದೀಶ್‌ ಹಿರೇಮುನಿ ಆರೋಪಿಸಿದರು.

ನಗರದ ಶ್ರೀ ನದೀದಡ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಬಿಜೆಪಿ ಘಟಕದ ವತಿಯಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಬಿಎಲ್ ಎ-2 ಕಾರ್ಯಾಗಾರವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ನಂತರ ಮಾತನಅಡಿದರು.ಕಾರ್ಯಾಗಾರದಲ್ಲಿ ಭಾಗವಹಿಸಿ ಮತದಾರರ ಪಟ್ಟಿ ಪರಿಷ್ಕರಣೆ, ಕಾರ್ಯಕರ್ತರು ಪಕ್ಷದ ಚಟುವಟಿಕೆಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾತನಾಡಿದ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಹತ್ವ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಅಕ್ರಮ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಬಗ್ಗೆ ಮಾಹಿತಿ ನೀಡುವುದು ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ತಿಳಿ ಹೇಳಿದರು.ದೇಶಾದ್ಯಂತ ಹಂತ ಹಂತವಾಗಿ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. 2026ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಸೇರಿದಂತೆ 10 ರಿಂದ 15 ರಾಜ್ಯಗಳನ್ನು ಒಳಗೊಂಡಿದೆ ಎಂದು ತಿಳಿಸಿದರು, ತಮಿಳುನಾಡಿನಲ್ಲಿ 74 ಲಕ್ಷ ನಕಲಿ ವೋಟುಗಳನ್ನು ಮತ್ತು ಕೇರಳ ರಾಜ್ಯದಲ್ಲಿ 5ಲಕ್ಷ ಜನರು ಮರಣ ಹೊಂದಿದ್ದಾರೆ, ಆದರೂ ಅವರೆಲ್ಲರೂ ಚುನಾವಣೆಯಲ್ಲಿ ಮತಗಳು ಚಲಾವಣೆ ಯಾಗಿದ್ದೇ ಅಂತಹ ನಕಲಿ ಮತಗಳನ್ನು ಡಿಲೀಟ್ ಮಾಡಲಾಗುವುದ ಎಂದರು.ದೇಶದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನದ ಅರ್ಹತೆ ಇದ್ದವರ ಹಕ್ಕನ್ನು ಕಿತ್ತುಕೊಳ್ಳಬಾರದು. ಒಬ್ಬ ವ್ಯಕ್ತಿ ಒಂದೇ ಕಡೆ ಮತದಾನ ಮಾಡಬೇಕು. ಮತದಾನದ ಹಕ್ಕಿಲ್ಲದವರಿಗೆ, ಎರಡು ಕಡೆ ಮತದಾನ ಮಾಡುವವರಿಗೆ ವಿಶೇಷ ತೀವ್ರ ಪರಿಷ್ಕರಣೆಯ ಮೂಲಕ ತಿರಸ್ಕಾರ ಮಾಡಿ ಚುನಾವಣಾ ಆಯೋಗವು ದೇಶಕ್ಕೆ ಭದ್ರ ಬುನಾದಿ ಹಾಕಲಿದೆ ಎಂದು ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಹೇಳಿದರು.ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ಮಾರ್ಕೆಟ್‌ ಮೋಹನ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳಿ, ಜಿಲ್ಲಾ ಖಜಾಂಚಿ ನಾಗಭೂಷಣರಾವ್, ಪ್ರಧಾನ ಕಾರ್ಯದರ್ಶಿ ಹರೀಶ್‌, ಕೋಡೀರ್ಲಪ್ಪ, ವೇಣುಮಾಧವ್, ನದಿಗಡ್ಡೆ ಪರಮೇಶ್‌, ಅನಿಲ್, ವೆಂಕಟಾದ್ರಿ, ಭರತ್ ಮತ್ತು ಪಕ್ಷದ ಅಭಿಮಾನಿಗಳು ಪಾಲ್ಗೊಂಡಿದ್ದರು.