ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ

| Published : May 03 2024, 01:01 AM IST

ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ
Share this Article
  • FB
  • TW
  • Linkdin
  • Email

ಸಾರಾಂಶ

ಪೆನ್‌ಡ್ರೈವ್‌ ಘಟನೆ ಬಯಲಿಗೆ ಬಂದ ನಂತರ ಮಹಿಳೆಯರ ಮಾನ ಮರ್ಯಾದೆಯ ಪ್ರಶ್ನೆಯಾಗಿದೆ. ವ್ಯಕ್ತಿ ಯಾರೇ ಆಗಿರಲಿ ಯಾವುದೇ ಪಕ್ಷದವರಾಗಿರಲಿ ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಲೇಬೇಕು

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಿಂದ ರಾಜಕಾರಣಿಗಳನ್ನು ಜನಸಾಮಾನ್ಯರು ಅನುಮಾನದಿಂದ ನೋಡುವಂತಾಗಿದ್ದು, ಈ ಪ್ರಕರಣ ಇಡೀ ಸಮಾಜವೇ ತಲೆತಗಿಸುವಂತಹ ಘಟನೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನುಡಿದರು.

ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಬಹುತೇಕ ರಾಜಕಾರಣಿಗಳು ಹಣ ಮಾಡುತ್ತಾರೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುವುದು ಸಹಜ. ಆದರೆ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ರಾಜಕಾರಣಿಗಳ ಬಗ್ಗೆ ಜನತೆ ಅನುಮಾನದಿಂದ ನೋಡುವಂತೆ ಮಾಡಿದೆ ಎಂದರು.

ತಪ್ಪು ಮಾಡಿದವರಿಗೆ ಶಿಕ್ಷೆ

ಪೆನ್‌ಡ್ರೈವ್‌ ಘಟನೆ ಬಯಲಿಗೆ ಬಂದ ನಂತರ ಮಹಿಳೆಯರ ಮಾನ ಮರ್ಯಾದೆಯ ಪ್ರಶ್ನೆಯಾಗಿದೆ. ವ್ಯಕ್ತಿ ಯಾರೇ ಆಗಿರಲಿ ಯಾವುದೇ ಪಕ್ಷದವರಾಗಿರಲಿ ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಲೇಬೇಕು. ಈಗಾಗಲೇ ವಿಶೇಷ ತನಿಖಾ ತಂಡ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ಈ ಪ್ರಕರಣದ ಬಗ್ಗೆ ಮಾತನಾಡಲು ಸಹ ನನಗೆ ಅಸಹ್ಯವಾಗುತ್ತೆ ಎಂದರು.

ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆ ನೀಡಿದ್ದ ಎಲ್ಲಾ ಗ್ಯಾರೆಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣದಿಂದಲ್ಲೇ ಜಾರಿಗೆ ತಂದಿಚ್ಚಿದರಿಂದ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಾಗಿ ನಿಂತಿರುವ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹೆಚ್ಚು ಸ್ಥಾನಗಳಲ್ಲಿ ಗೆಲುವ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಗೂಳೂರು ರಮೇಶ್ ಬಾಬು, ಪಿ.ಮಂಜುನಾಥರೆಡ್ಡಿ, ಶ್ರೀನಿವಾಸರೆಡ್ಡಿ, ಜಯಪ್ರಕಾಶ್‍ರೆಡ್ಡಿ, ಆನಂದ್, ಗೋಪಾಲರೆಡ್ಡಿ, ನಿಜಾಮುದ್ದೀನ್ ಮತ್ತಿತರರು ಇದ್ದರು.