ಸಾರಾಂಶ
ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ಗುರುವಾರದಿಂದಲೇ ಅರಂಭಗೊಂಡಿರುವ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಸಿಗುವ ಗುಣಮಟ್ಟದ ಶಿಕ್ಷಣ, ಮಧ್ಯಾಹ್ನದ ಬಿಸಿ ಊಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಇನ್ನಿತರೆ ಸೌಲಭ್ಯಗಳ ಕುರಿತು ಶಿಕ್ಷಕರು ಪೋಷಕರಲ್ಲಿ ಮನವರಿಕೆ ಮಾಡಿಕೊಟ್ಟು ಮಕ್ಕಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಬೇಕು
ಕನ್ನಡಪ್ರಭ ವಾರ್ತೆ ನಾಗಮಂಗಲ
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವವರಿಗೆ ಉತ್ತಮ ಭವಿಷ್ಯವಿದೆ. ಹಾಗಾಗಿ ವಿಶೇಷ ದಾಖಲಾತಿ ಆಂದೋಲನದ ಮೂಲಕ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಪೋಷಕರಲ್ಲಿ ಶಿಕ್ಷಕರು ಅರಿವು ಮೂಡಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್ ತಿಳಿಸಿದರು.ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ. ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿವೆ. ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಉತ್ತಮ ಭವಿಷ್ಯ ಕಟ್ಟಿಕೊಡಬೇಕೆಂದು ಪೋಷಕರಲ್ಲಿ ಮನವಿ ಮಾಡಿದರು.
ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ಗುರುವಾರದಿಂದಲೇ ಅರಂಭಗೊಂಡಿರುವ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಸಿಗುವ ಗುಣಮಟ್ಟದ ಶಿಕ್ಷಣ, ಮಧ್ಯಾಹ್ನದ ಬಿಸಿ ಊಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಇನ್ನಿತರೆ ಸೌಲಭ್ಯಗಳ ಕುರಿತು ಶಿಕ್ಷಕರು ಪೋಷಕರಲ್ಲಿ ಮನವರಿಕೆ ಮಾಡಿಕೊಟ್ಟು ಮಕ್ಕಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದರು.ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವಿನ ಜೊತೆಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ಕೊಟ್ಟು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಲ್ಲಿದ್ದ ಮಕ್ಕಳು ಖುಷಿಯಿಂದಲೇ ಶಾಲೆಗೆ ಆಗಮಿಸಿ ಪರಸ್ಪರ ಹಸ್ತಲಾಘವ ಕೊಟ್ಟು ಸ್ನೇಹಿತರೊಂದಿಗೆ ಸಂಭ್ರಮಿಸಿದರು.
ಈ ವೇಳೆ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಶಫಿಉಲ್ಲಾಖಾನ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಂಜುನಾಥ್, ಡಯಟ್‌ನ ಉಪನ್ಯಾಸಕ ನಾಗರಾಜು, ಮುಖ್ಯ ಶಿಕ್ಷಕ ಅಯೂಬ್‌ಪಾಷ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಸ್ಥಳೀಯ ಮುಖಂಡರು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))