ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡಿಲ್ಲ. ಮತ ಹಾಕಿದವರು, ಮತ ಹಾಕದವರು ಎಲ್ಲರೂ ನಮ್ಮವರೇ ಎಂದು ಭಾವಿಸಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ತಾರಿಹಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಉದ್ಘಾಟಿಸಿ ಮಾತನಾಡಿದ ಅವರು, ನಾನು ದೇವರ ಹೆಸರಿನಲ್ಲಿ ರಾಜಕಾರಣ ಮಾಡುವುದಿಲ್ಲ. ದೇವರ ಹೆಸರು ಹೇಳಿಕೊಂಡು ರಾಜಕಾರಣ ಮಾಡುವವರೇ ಬೇರೆ. ನಾವು ಅಭಿವೃದ್ಧಿ ಕೆಲಸ ಮಾಡುವವರು. ಜನರ ಸೇವೆ ಮಾಡುವವರು ಎಂದರು.ದೇವಸ್ಥಾನ ಅಭಿವೃದ್ಧಿಪಡಿಸುವ ಬಗ್ಗೆ ಎರಡು ವರ್ಷಗಳ ಹಿಂದೆಯೇ ತಾರಿಹಾಳ ಗ್ರಾಮಸ್ಥರಿಗೆ ಮಾತು ಕೊಟ್ಟಿದ್ದೆ. ಅದರಂತೆಯೇ ಇಂದು ಅದ್ಧೂರಿಯಾಗಿ ರಾಮಲಿಂಗೇಶ್ವರ ದೇವಸ್ಥಾನ ಉದ್ಘಾಟಿಸಲಾಗಿದೆ. ದೇವಸ್ಥಾನಕ್ಕೆ ₹1 ಕೋಟಿ ಅನುದಾನ ಒದಗಿಸಿದ್ದೇನೆ. ಕ್ಷೇತ್ರದ ಜನರ ಬೆಂಬಲವೇ ನಾನು ಸಚಿವೆಯಾಗಲು ಕಾರಣ. ಗ್ರಾಮಸ್ಥರು ನನಗೆ ಆಶೀರ್ವಾದದ ಜೊತೆಗೆ ಮತ ನೀಡಿದರು ಎಂದು ತಿಳಿಸಿದರು.ನಾನು ದೇವರ ಮೇಲೆ ನಂಬಿಕೆ ಇಟ್ಟವಳು. ಆ ದೇವರ, ನಿಮ್ಮೆಲ್ಲರ ಆಶೀರ್ವಾದ ಇರುವುದರಿಂದಲೇ ದೊಡ್ಡ ಅಪಘಾತವಾದರೂ ಬದುಕಿ ಬಂದಿರುವೆ. ಇನ್ನು ಹತ್ತು ಹಲವು ಗುಡಿಗಳನ್ನು ಅಭಿವೃದ್ಧಿಪಡಿಸುವ ಸಂಕಲ್ಪ ಹೊಂದಿರುವೆ. ಆ ದೇವರು, ಜನರೇ ನನ್ನನ್ನು ಇಲ್ಲಿಯವರೆಗೂ ತಂದು ನಿಲ್ಲಿಸಿದ್ದಾರೆ ಎಂದು ತಿಳಿಸಿದರು.ನಾನು ಶಾಸಕಿಯಾದ ಬಳಿಕ ಗುಡಿ ಗೋಪುರಗಳ ಜೀರ್ಣೋದ್ಧಾರಕ್ಕೆ ಹೆಚ್ಚು ಒತ್ತು ನೀಡಿರುವೆ. ಶುಕ್ರವಾರ ಹೊನ್ನಿಹಾಳ ಗ್ರಾಮದಲ್ಲಿ ವಿಠಲ ಬೀರ ದೇವರ ದೇವಸ್ಥಾನ ಉದ್ಘಾಟಿಸಲಾಯಿತು. ಈ ವೇಳೆ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ 5 ದಿನಗಳ ಕಾಲ ಅನ್ನಸಂತರ್ಪಣೆಯನ್ನೂ ಮಾಡಲಾಯಿತು. ಬಡಾಲ ಅಂಕಲಗಿ ಗ್ರಾಮದಲ್ಲಿ ₹2 ಕೋಟಿ ವೆಚ್ಚದಲ್ಲಿ ಲಕ್ಷ್ಮೀದೇವಿ ದೇವಸ್ಥಾನ ಹಾಗೂ ತುರಮುರಿ ಗ್ರಾಮದಲ್ಲಿ ನೂತನ ಶ್ರೀ ಜ್ಯೋತಿರ್ಲಿಂಗ ಮಂದಿರವನ್ನು ಉದ್ಘಾಟಿಸಿದೆ ಎಂದರು.ಈ ವೇಳೆ ಬಡೇಕೊಳ್ಳಿಮಠದ ಸದ್ಗುರು ಶಿವಯೋಗಿ ನಾಗೇಂದ್ರ ಸ್ವಾಮೀಜಿ, ನಾಗಯ್ಯ ಪೂಜಾರ, ಪ್ರಮೋದ್ ಜಾಧವ್, ಯಲ್ಲಪ್ಪ ಖನಗಾಂವ್ಕರ್, ಸ್ವಪ್ನಿಲ್ ಜಾಧವ್, ಸಿದ್ದಣ್ಣ ಖನಗಾಂವ್ಕರ್, ದೇವಸ್ಥಾನ ಸಮಿತಿಯ ಸದಸ್ಯರು, ಗ್ರಾಮದ ಅನೇಕ ಮುಖಂಡರು, ಮಹಿಳೆಯರು ಉಪಸ್ಥಿತರಿದ್ದರು.ನಾನು ಶಾಸಕಿಯಾದ ಬಳಿಕ ಗುಡಿ ಗೋಪುರಗಳ ಜೀರ್ಣೋದ್ಧಾರಕ್ಕೆ ಹೆಚ್ಚು ಒತ್ತು ನೀಡಿರುವೆ. ಶುಕ್ರವಾರ ಹೊನ್ನಿಹಾಳ ಗ್ರಾಮದಲ್ಲಿ ವಿಠಲ ಬೀರ ದೇವರ ದೇವಸ್ಥಾನ ಉದ್ಘಾಟಿಸಲಾಯಿತು. ಈ ವೇಳೆ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ 5 ದಿನಗಳ ಕಾಲ ಅನ್ನಸಂತರ್ಪಣೆಯನ್ನೂ ಮಾಡಲಾಯಿತು. ಬಡಾಲ ಅಂಕಲಗಿ ಗ್ರಾಮದಲ್ಲಿ ₹2 ಕೋಟಿ ವೆಚ್ಚದಲ್ಲಿ ಲಕ್ಷ್ಮೀದೇವಿ ದೇವಸ್ಥಾನ ಹಾಗೂ ತುರಮುರಿ ಗ್ರಾಮದಲ್ಲಿ ನೂತನ ಶ್ರೀ ಜ್ಯೋತಿರ್ಲಿಂಗ ಮಂದಿರವನ್ನು ಉದ್ಘಾಟಿಸಿದೆ.
-ಲಕ್ಷ್ಮೀ ಹೆಬ್ಬಾಳಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ.