ಸಾರಾಂಶ
ಸೋಮವಾರಪೇಟೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಬೇಕಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹರಪಳ್ಳಿ ರವೀಂದ್ರ ತಿಳಿಸಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಕ್ಲಾಕ್ ಟವರ್ ನಿರ್ಮಾಣಕ್ಕೆ ದಾನಿಗಳು ಹಾಗು ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಪ್ರತಿನಿಧಿ ಹರಪಳ್ಳಿ ರವೀಂದ್ರ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.ಹರಪಳ್ಳಿ ರವೀಂದ್ರ ಮಾತನಾಡಿ, ಸೋಮವಾರಪೇಟೆ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಚಿಂತನೆ ನಡೆಸಬೇಕಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. 50 ವರ್ಷಗಳಿಂದ ಸಾಮಾಜಿಕ ಕಳಕಳಿಯಿಂದ ಸೇವೆ ಸಲ್ಲಿಸುತ್ತಿರುವ ಜೇಸಿ ಸಂಸ್ಥೆಯ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಜೇಸಿಐ ಅಧ್ಯಕ್ಷ ಎಸ್.ಆರ್.ವಸಂತ್ ಅವರು ಮಾತನಾಡಿ, 3.50 ಲಕ್ಷ ರು., ವೆಚ್ಚದಲ್ಲಿ ಕ್ಲಾಕ್ ಟವರ್ ನಿರ್ಮಾಣವಾಗಲಿದೆ. ಪ್ರಸಕ್ತ ವರ್ಷದ ಜೇಸಿಐ ಥೀಮ್ ಸಮಯಪಾಲನೆ ಎಂಬುದಾಗಿದ್ದು, ಈ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರುಳೀಧರ್, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್.ಮಹೇಶ್, ಜೇಸಿಐ ಸ್ಥಾಪಕ ಅಧ್ಯಕ್ಷ ತೇಜಸ್ವಿ, ವಲಯ ಕಾರ್ಯದರ್ಶಿ ಮಾಯಾ ಗಿರೀಶ್, ಜೆಜೇಸಿ ಉಪಾಧ್ಯಕ್ಷೆ ಎ.ಆರ್.ಮಮತ, ಜೇಸಿಐ ಕಾರ್ಯದರ್ಶಿ ಜಗದಾಂಬ ಗುರುಪ್ರಸಾದ್, ಖಜಾಂಚಿ ಪುಷ್ಪಕ್ ಇದ್ದರು.