ಸರ್ಕಾರಿ ಕಾಲೇಜುಗಳ ಸಾಂಸ್ಕೃತಿಕ ಹಬ್ಬಕ್ಕೆ ಚಿಂತನೆ

| Published : Jul 05 2024, 01:01 AM IST

ಸರ್ಕಾರಿ ಕಾಲೇಜುಗಳ ಸಾಂಸ್ಕೃತಿಕ ಹಬ್ಬಕ್ಕೆ ಚಿಂತನೆ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವೆಂಬರ್ ತಿಂಗಳಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಮಟ್ಟದ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವೆಂಬರ್ ತಿಂಗಳಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಮಟ್ಟದ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜು ದಿನಾಚರಣೆ ಹಾಗೂ 2023-24ನೇ ಸಾಲಿನ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್‌ಎಸ್‌ಎಸ್, ಎನ್‌ಸಿಸಿ, ವಿವಿಧ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ನಗರ ಪ್ರದೇಶದ ಖಾಸಗಿ ಕಾಲೇಜುಗಳಲ್ಲಿ ಆಚರಿಸುವಂತೆ ನಮ್ಮ ಸರ್ಕಾರಿ ಕಾಲೇಜುಗಳಲ್ಲಿಯೂ ಸಹ ಯಾವುದೇ ಖಾಸಗಿ ಕಾಲೇಜಿಗೆ ಕಡಿಮೆ ಇಲ್ಲದಂತೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶವಿದೆ. ವಿವಿಧ ಕ್ಷೇತ್ರಗಳ ತಜ್ಞರು, ಕೈಗಾರಿಕೋದ್ಯಮಿಗಳು, ಕಾಲೇಜಿನ ಹಿತೈಷಿಗಳು ಸೇರಿ ಕಾಲೇಜು ಅಭಿವೃದ್ದಿ ಸಮಿತಿಯನ್ನು ನೂತನವಾಗಿ ರಚಿಸಲಾಗಿದೆ. ಈಗಾಗಲೇ ಕಾಲೇಜಿನಲ್ಲಿ ಸಿಎಸ್‌ಆರ್‌ ಮೂಲ ಸೌಕರ್ಯಗಳನ್ನು ನೀಡಲಾಗಿದೆ’ ಎಂದು ತಿಳಿಸಿದರು.

ಅಧ್ಯಾಪಕರು ಹಾಗೂ ಅತಿಥಿ ಶಿಕ್ಷಕರ ನೇಮಕವಾಗಿದೆ. ಕಾಲೇಜಿಗೆ ಜಿಮ್‌ಗೆ ಹೊಸ ಕಟ್ಟಡ ಹಾಗೂ ಕೊಠಡಿಗಳಿಗಾಗಿ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಕಾಲೇಜಿನ ಅಭಿವೃದ್ದಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ೩ ಎಕರೆ ಪ್ರಸ್ತಾವನೆಯಾಗಿದ್ದು, ವಿದ್ಯಾರ್ಥಿನಿಲಯ, ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ 5 ಎಕರೆ ಭೂಮಿ ಮಂಜೂರಾತಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆಯ ಸಮನ್ವಯಾಕಾರಿ ಬಿ.ಮಂಜುನಾಥ್ ಮಾತನಾಡಿ, ಜೀವನದಲ್ಲಿ ಉನ್ನತ ಮಟ್ಟಕ್ಕೆ ಏರಲು ಬಯಸುವವರು ಅಷ್ಟೇ ಪ್ರಮಾಣದಲ್ಲಿ ಸಾಧನೆಯನ್ನು ಮಾಡಬೇಕು. ವಿದ್ಯಾರ್ಥಿಗಳಲ್ಲಿ ತುಂಟಾಟ ಮೊದಲಾದ ಅಸಹಜ ಗುಣಗಳು ಸಹಜ. ಆದರೆ ಅದೇ ಮುಂದುವರೆಯಬಾರದು ಎಂದು ಶಿವಮೊಗ್ಗದಲ್ಲಿ ಪ್ರಾಂಶುಪಾಲರ ಮೇಲೆ ಕೈ ಎತ್ತಿದ್ದ ವಿದ್ಯಾರ್ಥಿಯೊಬ್ಬ ಪೊಲೀಸ್ ಅಕಾರಿಯಾದ ನಿದರ್ಶನ ನೀಡಿದರು.

‘ಚಿಕ್ಕ ದೇಶ ಜಪಾನ್ ಆರ್ಥಿಕತೆಯಲ್ಲಿ ಪ್ರಪಂಚದಲ್ಲಿಯೇ ೩ನೇ ಸ್ಥಾನದಲ್ಲಿದೆ. ಆದರೆ ಇಷ್ಟು ಜನಸಂಖ್ಯೆ ಹೊಂದಿರುವ ನಮ್ಮ ದೇಶ 5ನೇ ಸ್ಥಾನದಲ್ಲಿದೆ. ಬ್ರಿಟನ್ ಚೀನಾವನ್ನು ಸೋಲಿಸಲು ಅಫೀಮು ಸೇವನೆಯ ಚಟ ಹಿಡಿಸಿದರು. ಅಂತೆಯೇ ಇಂದು ಯುವ ಜನತೆ ಸಾಮಾಜಿಕ ಜಾಲತಾಣಗಳೆಂಬ ಚಟಗಳಿಗೆ ಬಲಿಯಾಗುತ್ತಿದ್ದಾರೆ’ ಎಂದು ಕಿವಿಮಾತು ಹೇಳಿದರು.

ವಿವಿಧ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಟಕ್ರಮ, ಯೋಗ ಪ್ರದರ್ಶನ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಸದಾಶಿವ ರಾಮಚಂದ್ರಗೌಡ, ನಗರಸಭಾ ಸದಸ್ಯರಾದ ಆರ್.ಹಂಸಪ್ರಿಯ, ಎಸ್.ಪದ್ಮನಾಭ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಲಲಿತ್ ಚಂಪಾಲಾಲ್, ಪಿ.ಸಿ.ವೆಂಕಟೇಶ್, ಕಾಂತರಾಜ್, ಪುಷ್ಪಾ ಶಿವಶಂಕರ್, ಎಂ.ಕೃಷ್ಣಮೂರ್ತಿ, ಪ್ರವೀಣ್, ಡಿ.ಶ್ರೀಕಾಂತ , ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಖಜಾಂಚಿ ಮಹೇಶ್ ಮೊದಲಾದವರು ಭಾಗವಹಿಸಿದ್ದರು.

ಫೋಟೋ:

3ಕೆಡಿಬಿಪಿ2- ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜು ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಧೀರಜ್ ಮುನಿರಾಜು ಉದ್ಘಾಟಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ಸಮನ್ವಯಾಕಾರಿ ಬಿ.ಮಂಜುನಾಥ್ ಇತರರು ಇದ್ದರು.