ಬಿಳಿಗಿರಿರಂಗನ ಚಿಕ್ಕ ತೇರಿಗೆ ಸಾವಿರಾರು ಭಕ್ತರು

| Published : Jan 17 2024, 01:47 AM IST

ಸಾರಾಂಶ

ಯಳಂದೂರು ತಾಲೂಕಿನ ಪೌರಾಣಿಕ ಹಾಗೂ ಐತಿಹಾಸಿಕ ಪ್ರಸಿದ್ಧಿ ಪಡೆದಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ ಮಂಗಳವಾರ ನಡೆದ ಚಿಕ್ಕಜಾತ್ರೆಗೆ ಸಾವಿರಾರು ಭಕ್ತರು ಆಗಮಿಸಿ ತೇರನ್ನು ಎಳೆದು ಸಂಭ್ರಮಿಸಿದರು. ಬಿಳಿಗಿರಿರಂಗನ ದೇವಸ್ಥಾನದ ಮುಂಭಾಗವಿದ್ದ ವಿವಿಧ ಬಣ್ಣ, ಬಣ್ಣದ ಪಟಗಳು, ಪುಷ್ಪದಿಂದ ಅಲಂಕೃತವಾದ ತೇರಿನಲ್ಲಿ ದೇವಸ್ಥಾನದಲ್ಲಿದ್ದ ಉತ್ಸವ ಮೂರ್ತಿಯನ್ನು 11.54 ರ ಸಮಯದಲ್ಲಿ ಕುಳ್ಳಿರಿಸಲಾಯಿತು. ಪ್ರತಿ ತೇರಿನ ಸಂದರ್ಭದಲ್ಲೂ ಬರುವಂತೆ ಗರುಡ ಪಕ್ಷಿಯು ರಥದ ಸುತ್ತ ಪ್ರದಕ್ಷಿಣೆ ಹಾಕಲಾಯಿತು.

ದೇವರಿಗೆ ಮೈಸೂರಿನ ಮಹಾರಾಜರು ನೀಡಿದ ಕಿರೀಟ ಸೇರಿದಂತೆ ವಿವಿಧ ಚಿನ್ನಾಭರಣಗಳಿಂದ ಅಲಂಕಾರ

ಕನ್ನಡಪ್ರಭ ವಾರ್ತೆ ಯಳಂದೂರು ತಾಲೂಕಿನ ಪೌರಾಣಿಕ ಹಾಗೂ ಐತಿಹಾಸಿಕ ಪ್ರಸಿದ್ಧಿ ಪಡೆದಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ ಮಂಗಳವಾರ ನಡೆದ ಚಿಕ್ಕಜಾತ್ರೆಗೆ ಸಾವಿರಾರು ಭಕ್ತರು ಆಗಮಿಸಿ ತೇರನ್ನು ಎಳೆದು ಸಂಭ್ರಮಿಸಿದರು. ಬಿಳಿಗಿರಿರಂಗನ ದೇವಸ್ಥಾನದ ಮುಂಭಾಗವಿದ್ದ ವಿವಿಧ ಬಣ್ಣ, ಬಣ್ಣದ ಪಟಗಳು, ಪುಷ್ಪದಿಂದ ಅಲಂಕೃತವಾದ ತೇರಿನಲ್ಲಿ ದೇವಸ್ಥಾನದಲ್ಲಿದ್ದ ಉತ್ಸವ ಮೂರ್ತಿಯನ್ನು 11.54 ರ ಸಮಯದಲ್ಲಿ ಕುಳ್ಳಿರಿಸಲಾಯಿತು. ಪ್ರತಿ ತೇರಿನ ಸಂದರ್ಭದಲ್ಲೂ ಬರುವಂತೆ ಗರುಡ ಪಕ್ಷಿಯು ರಥದ ಸುತ್ತ ಪ್ರದಕ್ಷಿಣೆ ಹಾಕಲಾಯಿತು. ಸಂಕ್ರಾಂತಿಯ ಮಾರನೇ ದಿನ ನಡೆಯುವ ಈ ಚಿಕ್ಕ ಜಾತ್ರೆಗೆ ದಾಸರು ಅಕ್ಕಿ, ಕಜ್ಜಾಯ, ಬೆಲ್ಲ, ತೆಂಗಿನಕಾಯಿ, ಕಡ್ಲೆಯನ್ನು ಹಾಕಿ ಬ್ಯಾಟೆಮನೆ ಸೇವೆ ಹಾಕಿ ದೇವಸ್ಥಾನದ ಸುತ್ತ ಜಾಗಟೆ, ಶಂಖನಾದ ಹೊಮ್ಮಿಸಿ ಹಾಪರ, ಗೋಪರ ಹಾಕಿ ಹರಕೆ ತೀರಿಸಿದರು. ದೇವರನ್ನು ಮೈಸೂರಿನ ಮಹಾರಾಜರು ನೀಡಿರುವ ಕಿರೀಟ ಸೇರಿದಂತೆ ವಿವಿಧ ಚಿನ್ನಾಭರಣಗಳಿಂದ ಅಲಂಕಾರ ಮಾಡಲಾಗಿತ್ತು. ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನವನ್ನು ಪಡೆದರು. ನಂತರ ಭಕ್ತರು ದೇವಸ್ಥಾನದಲ್ಲಿದ್ದ ದೇವರ ದೊಡ್ಡ ಪಾದುಕೆಗಳಿಂದ ತಲೆಗೆ ಹೊಡಿಸಿಕೊಳ್ಳುವ ಮೂಲಕ ಭಕ್ತಿ ಮೆರೆದರು. ಬೆಟ್ಟಕ್ಕೆ ಆಗಮಿಸುವ ದ್ವಿಚಕ್ರವಾಹನವನ್ನು ನಿಷೇಧಿಸಿ ಗುಂಬಳ್ಳಿ ಚೆಕ್ ಪೋಸ್ಟ್‌ನಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿತ್ತು. ಅಲ್ಲಿಂದಲೇ ಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಮಾಡಿ ಸುಗಮ ಸಂಚಾರಕ್ಕೆ ಪೊಲೀಸ್ ಇಲಾಖೆ ವ್ಯವಸ್ಥೆ ಮಾಡಿತ್ತು.