ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಸಾವಿರಾರು ಹೆಕ್ಟೇರ್‌ ಬೆಳೆ ಹಾನಿ : ಸಿಡಿಲಿಗೆ 3 ಬಲಿ

| N/A | Published : Apr 12 2025, 12:45 AM IST / Updated: Apr 12 2025, 10:30 AM IST

ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಸಾವಿರಾರು ಹೆಕ್ಟೇರ್‌ ಬೆಳೆ ಹಾನಿ : ಸಿಡಿಲಿಗೆ 3 ಬಲಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಕೊಪ್ಪಳ, ವಿಜಯನಗರ, ದಕ್ಷಿಣ ಕನ್ನಡ, ಕಲಬುರಗಿ, ಚಾಮರಾಜನಗರ ಸೇರಿ 8 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದು ರೈತರಿಗೆ ಅಪಾರ ನಷ್ಟ ಸಂಭವಿಸಿದೆ.  

 ಬೆಂಗಳೂರು : ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಕೊಪ್ಪಳ, ವಿಜಯನಗರ, ದಕ್ಷಿಣ ಕನ್ನಡ, ಕಲಬುರಗಿ, ಚಾಮರಾಜನಗರ ಸೇರಿ 8 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದು ರೈತರಿಗೆ ಅಪಾರ ನಷ್ಟ ಸಂಭವಿಸಿದೆ. ಕೊಪ್ಪಳ ಜಿಲ್ಲೆಯೊಂದರಲ್ಲೇ ಅಂದಾಜು 10 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಇದೇ ವೇಳೆ ಸಿಡಿಲಿಗೆ ಒಟ್ಟು ಮೂವರು ಬಲಿಯಾಗಿದ್ದಾರೆ.

ಮಳೆ-ಗಾಳಿ ಶುರುವಾದ ಕೂಡಲೇ ತೋಟದ ಮನೆ ಬಾಗಿಲು ಹಾಕಿಕೊಂಡು ಬರಲು ಹೋಗಿದ್ದ ಕೊಪ್ಪಳದ ನಿವಾಸಿಗಳಾದ ಮಂಜುನಾಥ ಗಾಳಿ (48) ಹಾಗೂ ಗೋವಿಂದಪ್ಪ ಮ್ಯಾಗಳಮನಿ (62) ಎಂಬವರಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದೇ ವೇಳೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಮನೆ ಮೇಲೆ ಒಣಗಲು ಹಾಕಿದ್ದ ಬೆಡ್‌ಶೀಟ್‌ ತರಲು ಹೋಗಿದ್ದಾಗ 16 ವರ್ಷದ ಬಾಲಕ ಪಾಂಡು ನಾಯ್ಕ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಕಟಾವಿಗೆ ಬಂದಿದ್ದ 8-9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿ ಸಂಪೂರ್ಣ ನೀರು ಪಾಲಾಗಿದೆ. ಹ್ಯಾಟಿ, ಮುದ್ದಾಬಳ್ಳಿ, ಡೊಂಬರಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಬೆಳೆದಿದ್ದ ಬಾಳೆ ಬೆಳೆ ಬಿರುಗಾಳಿಗೆ ನೆಲಕ್ಕೆ ಬಿದ್ದಿದ್ದು ಅಪಾರ ಹಾನಿ ಸಂಭವಿಸಿದೆ. ಇದೇ ವೇಳೆ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನಲ್ಲಿ ಗುರುವಾರ ತಡರಾತ್ರಿ ಸುರಿದ ಗಾಳಿ ಮಳೆಗೆ ಭತ್ತ ನೆಲಕ್ಕೆ ಬಿದ್ದಿದೆ. ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ಬೆಳೆದು ನಿಂತಿದ್ದ, ಪಪ್ಪಾಯಿ ಮರಗಳು ಮುರಿದು ಬಿದ್ದಿವೆ. ಹುಬ್ಬಳ್ಳಿ-ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಿದೆ.