ಸಾರಾಂಶ
ಉಡುಪಿ, ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಅಭಿಯಾನ ನಡೆಸಲಾಗುತ್ತದೆ. ಉಡುಪಿ ಕಾಂಗ್ರೆಸ್ ನಿಂದ ಮತಗಳ್ಳತನದ ವಿರುದ್ದ ತನಿಖೆಗೆ ಆಗ್ರಹಿಸಿ ಸಹಿ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿಕೇಂದ್ರ ಸರ್ಕಾರದ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಅವರು ‘ವೋಟ್ ಚೋರ್, ಗದ್ದಿ ಚೋಡ್’ ಅಭಿಯಾನ ಆರಂಭಿಸಿದ್ದು ಈ ಅಭಿಯಾನಕ್ಕೆ ರಾಷ್ಟ್ರ ಮತ್ತು ರಾಜ್ಯದ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.ಅವರು ಶುಕ್ರವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುರಾವೆ ಸಮೇತ ಈ ಹಗರಣ ಬಯಲು ಮಾಡಿರುವ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ರಾಜ್ಯ ಮತ್ತು ದೇಶದಲ್ಲಿ ಆಗಿರುವ ಮತಗಳ್ಳತನವನ್ನು ಚುನಾವಣಾ ಆಯೋಗದ ಮುಂದೆ ಇಡುವ ಅಭಿಯಾನ ಇದಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಗಳು ಸೂಕ್ತ ಏಜೆನ್ಸಿಯಿಂದ ತನಿಖೆ ನಡೆಸಬೇಕು. ಅದಕ್ಕಾಗಿ ಮತ ಕಳ್ಳರು ಕುರ್ಚಿ ಬಿಡಿ ಎಂಬ ಈ ಆಭಿಯಾನವನ್ನು ದೇಶದಾದ್ಯಂತ ನಡೆಸಲಾಗುತ್ತಿದೆ ಎಂದರು.
ಉಡುಪಿ, ದ.ಕ. ಜಿಲ್ಲೆಯಲ್ಲಿ ಈ ಅಭಿಯಾನ ನಡೆಸಲಾಗುತ್ತದೆ. ಉಡುಪಿ ಕಾಂಗ್ರೆಸ್ ನಿಂದ ಮತಗಳ್ಳತನದ ವಿರುದ್ದ ತನಿಖೆಗೆ ಆಗ್ರಹಿಸಿ ಸಹಿ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ಐವನ್ ಡಿಸೋಜಾ ಹೇಳಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಕೆಪಿಸಿಸಿ ಉಪಾಧ್ಯಕ್ಷ ಎಂ. ಎ. ಗಫೂರ್, ಪಕ್ಷದ ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ ಶೆಟ್ಟಿ ಮತ್ತಿತರರು ಇದ್ದರು.