ಸಾರಾಂಶ
ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ತಾಲೂಕಿನ ಮೈಲನಾಯಕನಹಳ್ಳಿ ಗ್ರಾಪಂ ಪಿಡಿಒಗೆ ಸದಸ್ಯರೊಬ್ಬರು ಕರ್ತವ್ಯದ ವೇಳೆ ಧಮಕಿ ಹಾಕಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ತಾಪಂ ಕಾರ್ಯನಿರ್ವಾಣಾಧಿಕಾರಿ ಹಾಗೂ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.ಮೈಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಶೀಬಾ ನಿಖತ್ ಸುಮಾರು 5 ವರ್ಷಗಳಿಂದ ಸದರಿ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಎಂದಿನಂತೆ ಪಿಡಿಒ ಶೀಬಾ ನಿಖತ್ ಅವರು ಡಿ. 12ರಂದು ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಮೈಲನಾಯಕನ ಹೊಸಹಳ್ಳಿ ಗ್ರಾಮದ ಸದಸ್ಯರಾದ ರವಿಕುಮಾರ ಎಂ. ಅವರು ಗ್ರಾಮ ಪಂಚಾಯಿತಿ ಕಚೇರಿಗೆ ಬಂದು ಏಕಾಏಕಿಯಾಗಿ ಮಹಿಳಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಮೇಲೆ ಅನವಶ್ಯಕವಾಗಿ ಗಲಾಟೆ ಶುರು ಮಾಡಿ, ಅವರ ಸರ್ಕಾರಿ ಕೆಲಸಕ್ಕೆ ಅಡ್ಡಿ ಉಂಟುಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.ನೀರಿನ ಬಾಟಲ್‌ನ್ನು ಅಧಿಕಾರಿ ಕಡೆ ಎಸೆದು, ಏರುದನಿಯಲ್ಲಿ ಮಾತನಾಡಿದ್ದಾರೆ ಹಾಗೂ ಗ್ರಾಮ ಪಂಚಾಯಿತಿಯ ಇತರ ನೌಕರರಿಗೂ ಕೂಡ ಬೈಯ್ದು, ಬೆದರಿಕೆ ಹಾಕಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ನೀರಿನ ಬಾಟಲನ್ನು ಎಸೆದ ವ್ಯಕ್ತಿಯ ಮೇಲೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪಿಡಿಒ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ಸದರಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.ಚನ್ನಪಟ್ಟಣ ತಾಲೂಕು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಆರ್.ದೇವರಾಜು ಹಾಗೂ ತಾಲೂಕಿನ ಎಲ್ಲಾ ಪಿಡಿಒಗಳು ಇದ್ದರು. ಪೊಟೋ೨೩ಸಿಪಿಟಿ೧: ಚನ್ನಪಟ್ಟಣ ತಾಲೂಕು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂ ಇಒಗೆ ಮನವಿ ಸಲ್ಲಿಸಲಾಯಿತು.