ಸಾರಾಂಶ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸರ್ಕಾರಿ ನೌಕರರ ಸಂಘದ ನಿರ್ದೇಶಕರಿಗೆ ಜಿಲ್ಲಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಬೆದರಿಕೆ ವೊಡ್ಡುತ್ತಿರುವ ವಿಧಾನ ಪರಿಷತ್ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ದೇವೇಂದ್ರ ಚುನಾವಣಾಧಿಕಾರಿ ಬಸವರಾಜು ಅವರಿಗೆ ಭಾನುವಾರ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಚುನಾವಣೆ ನಡೆಯುತ್ತಿದೆ. ಈ ಸಂದರ್ಭ ದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ರಾಜಕೀಯ ಹಸ್ತಕ್ಷೇಪ ಬಳಸಿ ನೌಕರರಿಗೆ ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ಸರ್ಕಾರಿ ನೌಕರರಿಗೆ ಬೆದರಿಕೆ ಹಾಗೂ ಆಣೆ ಪ್ರಮಾಣ ಮಾಡಿ ಚುನಾವಣೆಗೆ ಅಡ್ಡಿಪಡಿಸುತ್ತಿರುವ ವಿಧಾನ ಪರಿಷತ್ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಪಾರದರ್ಶಕತೆಯಿಂದ ನಡೆಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಅಧ್ಯಕ್ಷ ಸ್ಥಾನದ ಆಕಾಂಕ್ಷಿ ದೇವೇಂದ್ರ ಅವರು ಸರ್ಕಾರಿ ನೌಕರರಿಗೆ ಬೆದರಿಕೆ ಒಡ್ಡುತ್ತಿರುವ ಮತ್ತು ಕ್ರಮಕ್ಕಾಗಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೂ ಮನವಿ ನೀಡಿದ್ದಾರೆ.ಮನವಿ ಸಲ್ಲಿಸಿದ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಖಜಾಂಚಿ ಅಭ್ಯರ್ಥಿ ಎಸ್.ಟಿ.ಪೂರ್ಣೇಶ್, ಸಂಘದ ಗೌರವಾಧ್ಯಕ್ಷ ಮಂಜುನಾಥಸ್ವಾಮಿ, ರಾಜ್ಯ ಪರಿಷತ್ ಅಭ್ಯರ್ಥಿ ಬಿ.ಚೇತನ್ ಹಾಜರಿದ್ದರು. 1 ಕೆಸಿಕೆಎಂ 4ಸರ್ಕಾರಿ ನೌಕರರ ಸಂಘದ ನಿರ್ದೇಶಕರುಗಳಿಗೆ ಚುನಾವಣೆ ಕುರಿತಂತೆ ಬೆದರಿಕೆ ವೊಡ್ಡುತ್ತಿರುವ ವಿಧಾನ ಪರಿಷತ್ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದೇವೇಂದ್ರ ಅವರು ಚುನಾವಣಾಧಿಕಾರಿ ಬಸವರಾಜು ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.