ಸಾರಾಂಶ
ಮಗು ಅನಾರೋಗ್ಯದಿಂದ ಬಳಲುತ್ತಿದೆ ಎಂದು ಪೋಷಕರು ಸೆ.12ರಂದು ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ವೈದ್ಯರು ಮಗುವಿನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.
ಕಾರ್ಕಳ: ಪೋಷಕರೇ ತಮ್ಮ ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಹೆಬ್ರಿ ತಾಲೂಕಿನ ಶೇಡಿಮನೆ ಚಕ್ಕರಮಕ್ಕಿ ಎಂಬಲ್ಲಿ ನಡೆದಿದೆ.
ಮಗು ಅನಾರೋಗ್ಯದಿಂದ ಬಳಲುತ್ತಿದೆ ಎಂದು ಪೋಷಕರು ಸೆ.12ರಂದು ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ವೈದ್ಯರು ಮಗುವಿನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಜಿಲ್ಲಾ ಆರೋಗ್ಯ ಇಲಾಖೆ, ಡಿಎಚ್‌ಒ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದಾರೆ.ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಅಮಾವಾಸ್ಯೆಬೈಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ನೀಡಿದ ಮಾಹಿತಿಯಂತೆ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದೇವೆ. ಮಗುವಿನ ಆರೋಗ್ಯ ವಿಚಾರಿಸಿ ವರದಿ ಪಡೆದಿದ್ದೇವೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.