ಭಾರತ ನೌಕಾ ಪಡೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಲ್ಲಿನ ಕೊಚ್ಚಿನ್ ಶಿಪ್‌ಯಾರ್ಡ್‌ನ ಇಬ್ಬರು ನೌಕರರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದಇನ್ನೊಬ್ಬ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಮಲ್ಪೆ: ಭಾರತ ನೌಕಾ ಪಡೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಲ್ಲಿನ ಕೊಚ್ಚಿನ್ ಶಿಪ್‌ಯಾರ್ಡ್‌ನ ಇಬ್ಬರು ನೌಕರರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದಇನ್ನೊಬ್ಬ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗುಜರಾತ್‌ನ ಆನಂದ್ ತಾಲೂಕು, ಕೈಲಾಸ್ ನಗರಿ ನಿವಾಸಿ ಹೀರೇಂದ್ರ ಕುಮಾರ್ ಖಡಯಾತ್ (34) ಎಂದು ಗುರುತಿಸಲಾಗಿದೆ. ಈತ ಕೂಡ ಕೊಚ್ಚಿನ್ ಶಿಪ್‌ಯಾರ್ಡ್ ನಲ್ಲಿಉದ್ಯೋಗಿಯಾಗಿದ್ದಾನೆ.ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್ ನಲ್ಲಿ ಗುತ್ತಿಗೆ ಆಧಾರದಲ್ಲಿಕೆಲಸ ಮಾಡುತ್ತಿದ್ದ ಉತ್ತರಪ್ರದೇಶ ರಾಜ್ಯದ ರೋಹಿತ್ ಮತ್ತು ಸಂತ್ರಿ ಎಂಬವರು ಇಲ್ಲಿಗೆ ದುರಸ್ತಿಗೆ ಬರುತ್ತಿದ್ದಭಾರತೀಯ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್ ಮತ್ತಿತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಪಾಕಿಸ್ತಾನಕ್ಕೆ ರವಾನಿಸಿ ಹಣ ಪಡೆಯುತ್ತಿದ್ದಆರೋಪದ ಮೇಲೆ ಬಂಧಿಸಲಾಗಿತ್ತು. ಅವರ ಮೇಲೆ ದೇಶದ ಭದ್ರತೆಗೆ ಧಕ್ಕೆ ತಂದ ಪ್ರಕರಣಗಳನ್ನು ದಾಖಸಲಾಗಿದ್ದು, ಇಬ್ಬರೂ ಇದೀಗ ನ್ಯಾಯಾಂಗ ಬಂದನದಲ್ಲಿದ್ದಾರೆ. ವಿಚಾರಣೆ ವೇಳೆ ಈ ಆರೋಪಿಗಳಿಗೆ ನೀಡಿದ ಮಾಹಿತಿಯಂತೆ ಅವರಿಗೆ ಮೊಬೈಲ್ ಸಿಮ್‌ಗಳನ್ನು ಒದಗಿಸುತಿದ್ದ ಹೀರೇಂದ್ರ ಕುಮಾರ್ ನನ್ನು ತನಿಖಾಧಿಕಾರಿ ಕಾರ್ಕಳ ಡಿವೈಎಸ್ಪಿ ಡಾ. ಹರ್ಷ ಪ್ರಿಯಂವಧ ಅವರು ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಿ, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ತನಿಖೆ ಮುಂದುವರಿದೆ. ಈ ಪ್ರಕರಣದಲ್ಲಿಇನ್ನೂ ಅನೇಕ ಮಂದಿ ಶಾಮೀಲಾಗಿರುವ ಸಂಶಯಗಳಿವೆ.