ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರ್.ಟಿ. ನಗರ ಸಮೀಪದ ರೆಹಮನ್ ನಗರದ ಸೈಯದ್ ಅಲ್ಪಾಜ್ ಅಲಿಯಾಸ್ ಅಲ್ಫಜ್, ಮುನೇಶ್ವರ ಸಿ ಬ್ಲಾಕ್ ನ ಸಂದೀಪ್ ಕುಮಾರ್ ಹಾಗೂ ಮೊಹಮ್ಮದ್ ಸೈಫ್ ಬಂಧಿತರಾಗಿದ್ದು, ಆರೋಪಿಗಳಿಂದ 2.10 ಲಕ್ಷ ರು. ಮೌಲ್ಯದ 21 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ನಾಗೇನಹಳ್ಳಿ ಮುಖ್ಯರಸ್ತೆಯಲ್ಲಿ ಡ್ರಗ್ಸ್ ಮಾರಾಟಕ್ಕೆ ಆರೋಪಿಗಳು ಯತ್ನಿಸಿದ್ದಾಗ ಖಚಿತ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಹಲವು ದಿನಗಳಿಂದ ಹಣದಾಸೆಗೆ ಡ್ರಗ್ಸ್ ದಂಧೆಯಲ್ಲಿ ಈ ಆರೋಪಿಗಳು ತೊಡಗಿದ್ದರು. ಕಡಿಮೆ ಬೆಲೆಗೆ ಹೊರ ಜಿಲ್ಲೆ ವ್ಯಕ್ತಿಯಿಂದ ಡ್ರಗ್ಸ್ ಖರೀದಿಸಿ ಬಳಿಕ ನಗರದಲ್ಲಿ ದುಬಾರಿ ಬೆಲೆಗೆ ಅವರು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.2.38 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ವಿದೇಶದಿಂದ ಕಳ್ಳ ಹಾದಿಯಲ್ಲಿ ಬಂದ 2.23 ಕೋಟಿ ರು. ಮೌಲ್ಯದ ಹೈಡ್ರೋ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.ಬ್ಯಾಕಾಂಕ್‌ನಿಂದ ಕೆಐಎಗೆ ಜ.26 ರಂದು ಬಂದಿಳಿದ ಪ್ರವಾಸಿಗನನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು, ಆತನ ಬಳಿ 2.23 ಕೋಟಿ ರು. ಮೌಲ್ಯದ 6.38 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
