ಸಾರಾಂಶ
ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಅಕ್ಕು ಬಂಧಿತರು. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬುವವರ ಮನೆಯಲ್ಲಿ ವಾಸವಿದ್ದರು. ಪಶ್ಚಿಮಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿದ್ದ ನುಸುಳುಕೋರರು ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದವರು ಎನ್ನುವ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಲಾಗಿದೆ.
ಕನ್ನಡಪ್ರಭ ವಾರ್ತೆ ಹಾಸನ
ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಅಕ್ಕು ಬಂಧಿತರು. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬುವವರ ಮನೆಯಲ್ಲಿ ವಾಸವಿದ್ದರು. ಜುಬೇರ್ ನಿರ್ಮಿಸುತ್ತಿದ್ದ ಕಟ್ಟಡ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದರು.ಪಶ್ಚಿಮಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿದ್ದ ನುಸುಳುಕೋರರು ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದವರು ಎನ್ನುವ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಿದ ಪೊಲೀಸರು, ಇವರ ಬಳಿ ಇರುವ ಆಧಾರ್ ಕಾರ್ಡ್‌ಗಳು ನಕಲಿ ಎನ್ನುವುದು ಖಾತ್ರಿಯಾದ ನಂತರ ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.