ಸಾರಾಂಶ
ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿರುವ ಘಟನೆ ತಾಲೂಕಿನ, ಕುನಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರತ್ (16), ಧನಂಜಯ್ (16), ಮುರುಳಿ (16) ಕಾಣಿಯಾಗಿರುವ ವಿದ್ಯಾರ್ಥಿಗಳು. ಕಾಣೆಯಾಗಿರುವ ಮೂವರು ಬಾಲಕರು ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬುವವರ ಮಕ್ಕಳಾಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆಗೆ ಮುಂದಾಗಿರುವ ಪೊಲೀಸರಿಗೆ ಬಾಲಕರು ಮೈಸೂರಿನತ್ತ ತೆರಳಿರುವ ಮಾಹಿತಿ ಲಭ್ಯವಾಗಿದೆ. ಹಾಗಾಗಿ ಪೊಲೀಸರು ಮೈಸೂರಿಗೆ ತೆರಳಿದ್ದಾರೆ.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿರುವ ಘಟನೆ ತಾಲೂಕಿನ, ಕುನಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರತ್ (16), ಧನಂಜಯ್ (16), ಮುರುಳಿ (16) ಕಾಣಿಯಾಗಿರುವ ವಿದ್ಯಾರ್ಥಿಗಳು.ಕುನಿಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಆದರವಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಮೂವರು ಬಾಲಕರು ಬುಧವಾರ ಬೆಳಿಗ್ಗೆ 7.30ಕ್ಕೆ ಮನೆಯಿಂದ ಶಾಲೆಗೆ ಹೋಗುವುದಾಗಿ ಹೇಳಿ ಹೋದವರು ಕಾಣೆಯಾಗಿದ್ದಾರೆ. ಅವರು ಶಾಲೆಗೆ ಬರದಿದ್ದರಿಂದ ಶಿಕ್ಷಕರು ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪೋಷಕರು ತಮ್ಮ ಮಕ್ಕಳಿಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಬಾಲಕರು ರಾತ್ರಿಯಾದರೂ ಮನೆಗೆ ಬಂದಿಲ್ಲ. ಮೂವರು ಬಾಲಕರ ಪೈಕಿ ಶರತ್ ಬಳಿಯಿರುವ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದೆ.
ಕಾಣೆಯಾಗಿರುವ ಮೂವರು ಬಾಲಕರು ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬುವವರ ಮಕ್ಕಳಾಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆಗೆ ಮುಂದಾಗಿರುವ ಪೊಲೀಸರಿಗೆ ಬಾಲಕರು ಮೈಸೂರಿನತ್ತ ತೆರಳಿರುವ ಮಾಹಿತಿ ಲಭ್ಯವಾಗಿದೆ. ಹಾಗಾಗಿ ಪೊಲೀಸರು ಮೈಸೂರಿಗೆ ತೆರಳಿದ್ದಾರೆ.ಶಾಲೆಯಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಎರಡು ಪರೀಕ್ಷೆಗಳಿಗೆ ಹಾಜರಾಗಿದ್ದಾರೆ. ಬುಧವಾರ ಇಂಗ್ಲೀಷ್ ಪರೀಕ್ಷೆ ಇತ್ತು. ಹಾಗಾಗಿ ಹೆದರಿ ಮನೆ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.