ಸಾರಾಂಶ
ಕನ್ನಡಪ್ರಭ ವಾರ್ತೆ ಎಚ್.ಡಿ.ಕೋಟೆ
ತಾಲೂಕಿನ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಹೈರಿಗೆ ಗ್ರಾಮದಲ್ಲಿ ಮೂರು ಮಂದಿಗೆ ಭೇದಿ ಪ್ರಕರಣ ಕಂಡು ಬಂದಿದೆ.ಈ ಹಿನ್ನೆಲೆ ಶುಕ್ರವಾರ ಇಒ ಧರಣೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್, ಎಇಇ ಗೋವಿಂದ ನಾಯ್ಕ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಕಲಾ, ಪಿಡಿಒ ಸಂತೋಷ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಮತ್ತು ಆಶಾ ಕಾರ್ಯಕರ್ತೆಯರ ತಂಡವನ್ನು ರಚಿಸಿ, ಗ್ರಾಮದ ಎಲ್ಲ ಮನೆಗಳ ಸಮೀಕ್ಷೆ ಮಾಡಲಾಯಿತು. ಗ್ರಾಮದ ಎಲ್ಲ ಪ್ರಮುಖ ಬೀದಿಗಳಲ್ಲಿ ಪರಿಶೀಲಿಸಿ, ಓವರ್ ಹೆಡ್ ಟ್ಯಾಂಕ್ ನ್ನು ಸ್ವಚ್ಛಗೊಳಿಸುತ್ತಿರುವುದನ್ನು ಪರಿಶೀಲಿಸಲಾಯಿತು.ಗ್ರಾಮದ ಸುತ್ತಮುತ್ತ ಅಳವಡಿಸಿರುವ ಪೈಪ್ ಗಳನ್ನು ಪರಿಶೀಲಿಸಿದಾಗ ಎಲ್ಲ ಸುಸ್ಥಿತಿಯಲ್ಲಿ ಇರುವುದು ಕಂಡುಬಂದಿರುತ್ತದೆ ಮತ್ತು ಕುಡಿಯುವ ನೀರನ್ನು ಪರೀಕ್ಷೆ ಗೆ ಕಳುಹಿಸಿದಾಗ ನೀರು ಕುಡಿಯಲು ಯೋಗ್ಯವಾಗಿದೆ ಎಂದು ವರದಿ ಬಂದಿರುತ್ತದೆ.
ಒಟ್ಟಾರೆ ಗ್ರಾಮದಲ್ಲಿ ಎಲ್ಲರೂ ಆರೋಗ್ಯವಾಗಿದ್ದಾರೆ. ಹೈರಿಗೆ ಗ್ರಾಪಂ ಸಭಾಂಗಣದಲ್ಲಿ ಮಾನ್ಯ ಇಒ ಸಮ್ಮುಖದಲ್ಲಿ ಸಭೆ ನಡೆಸಿ ಜನರಿಗೆ ಶುದ್ದ ಆಹಾರ ಸೇವಿಸುವಂತೆ ಮತ್ತು ನೀರನ್ನು ಚೆನ್ನಾಗಿ ಕಾಯಿಸಿ ಕುದಿಸಿ ಕುಡಿಯಲು ತಿಳಿಸಿದರು.ಮೂರು ಸಂಶಯಾಸ್ಪದ ಭೇದಿ ಪ್ರಕರಣಗಳ ರೋಗಿಗಳು ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಈಗ ಗುಣಮುಖರಾಗಿದ್ದಾರೆ. ತಾಲೂಕು ಆರೋಗ್ಯಾಧಿಕಾರಿಗಳು ಎಂದರು.
ಗ್ರಾಪಂ ಅಧ್ಯಕ್ಷೆ ಜಯ, ನಾಗರಾಜು, ಸದಸ್ಯರಾದ ದಿನೇಶ್, ಶಿವಣ್ಣ , ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ, ರಾಮಚಂದ್ರ, ರವಿರಾಜ್ ಆರೋಗ್ಯ ಇಲಾಖೆ ಸಿಬ್ಬಂದಿ ದೊರೆ, ಶಶಿರೇಖಾ, ಶೀಲಾ, ಗ್ರಾಪಂ ಕಾರ್ಯದರ್ಶಿ ಬಸವರಾಜು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.ಡೆಂಘೀ ಜ್ವರ, ಚಿಕೂನ್ ಗುನ್ಯಾ ರೋಗ ನಿಯಂತ್ರಣಕ್ಕಾಗಿ ಪಾಲಿಕೆ ಮುನ್ನೆಚ್ಚರಿಕೆ ಕ್ರಮಕನ್ನಡಪ್ರಭ ವಾರ್ತೆ ಮೈಸೂರುಡೆಂಘೀ ಮತ್ತು ಚಿಕೂನ್ ಗುನ್ಯಾ ಕಾಯಿಲೆಗಳನ್ನು ಹರಡುವ ಈಡಿಸ್ ಈಜಿಪ್ಟ್ ಸೊಳ್ಳೆಯ ಉತ್ಪತ್ತಿಯು ಹೆಚ್ಚಾಗಿರುವ ಕಾರಣ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 65 ವಾರ್ಡ್ ಗಳಲ್ಲಿ ಶೇಖರಣೆಗೊಂಡಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳೆನೀರಿನ ಚಿಪ್ಪು, ಮರದ ಪೊಟರೆಯಲ್ಲಿ ಹೂವಿನ ಕಪಾಟುಗಳಲ್ಲಿ, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಎಚ್ಚರ ವಹಿಸುವುದು ಹಾಗೂ ಪ್ರತಿ ವಾರ್ಡ್ ನಲ್ಲಿ ಸ್ವಚ್ಚತಾ ಕಾರ್ಯಕೈಗೊಂಡು ತ್ಯಾಜ್ಯ ವಿಲೇವಾರಿ ಮಾಡಿಸಲು ಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.ಡೆಂಘೀ ರೋಗವು ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೈಯಿಂಗ್ ಯಂತ್ರದ ಮೂಲಕ ಸೊಳ್ಳೆ ನಿಯಂತ್ರಣ ಔಷಧಿ ಸಿಂಪಡಣೆ ಮಾಡಿಸುವುದು ಹಾಗೂ ಪ್ರತಿ ಮನೆಗಳಿಗೆ ಭೇಟಿ ನೀಡಿ ಡೆಂಘೀ ರೋಗ ನಿಯಂತ್ರಣ ಕುರಿತಾದ ಕರಪತ್ರ ವಿತರಿಸಿ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ವಲಯ ಆಯುಕ್ತರು, ಪರಿಸರ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರಿಗೆ ಸೂಚಿಸಲಾಗಿದೆ.ಒಂದು ವೇಳೆ ವಿಷಯವನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ತೋರಿದಲ್ಲಿ ಸಂಬಂಧಪಟ್ಟ ಅಧಿಕಾರಿ ಅಥವಾ ಸಿಬ್ಬಂದಿ ವರ್ಗದವರನ್ನು ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸಾರ್ವಜನಿಕರು, ಹೊಟೇಲ್ ಮಾಲೀಕರು ಮತ್ತು ಬೀದಿ ಬದಿ ವ್ಯಾಪಾರಸ್ಥರು ಸಾಂಕ್ರಾಮಿಕ ರೋಗಗಳು ಹರಡದಂತೆ ಪಾಲಿಕೆಯೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.