ಕೃಷಿ ಪ್ರವಾಸೋದ್ಯಮ ಮೂಲಕ ಗ್ರಾಮೀಣ ಸಂಸ್ಕೃತಿ ಪರಿಚಯ

| Published : Jan 21 2025, 12:31 AM IST

ಕೃಷಿ ಪ್ರವಾಸೋದ್ಯಮ ಮೂಲಕ ಗ್ರಾಮೀಣ ಸಂಸ್ಕೃತಿ ಪರಿಚಯ
Share this Article
  • FB
  • TW
  • Linkdin
  • Email

ಸಾರಾಂಶ

ಕೃಷಿ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸುತ್ತದೆ.

ಕನ್ನಡಪ್ರಭ ವಾರ್ತೆ, ಮೈಸೂರುಪ್ರವಾಸಿಗರಿಗೆ ಗ್ರಾಮೀಣ ಸಂಸ್ಕೃತಿ ಪರಿಚಯಿಸುವ ಕಾರ್ಯವನ್ನು ಕೃಷಿ ಪ್ರವಾಸೋದ್ಯಮದ ಮೂಲಕ ಮಾಡಬಹುದು ಎಂದು ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ. ಸವಿತಾ ತಿಳಿಸಿದರು.ಜೈಪುರದ ಚರಣಸಿಂಗ್ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆ (ಎನ್.ಐ.ಎ.ಎಂ), ರಾಜ್ಯ ಪ್ರವಾಸೋದ್ಯಮ ಇಲಾಖೆ ಮತ್ತು ಮೈಸೂರಿನ ವಿಶ್ವೇಶ್ವರಯ್ಯ ಅಭಿವೃದ್ಧಿ ಸಂಸ್ಥೆ ಸೋಮವಾರ ಆಯೋಜಿಸಿದ್ದ ಕೃಷಿ ಪ್ರವಾಸೋದ್ಯಮ-ಕೃಷಿ ಉತ್ಪನ್ನಗಳ ಮಾರುಕಟ್ಟೆಗೆ ಹೊಸ ಆಯಾಮ ಎಂಬ ಮೂರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕೃಷಿ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸುತ್ತದೆ. ಸ್ಥಳೀಯವಾಗಿ ಲಭ್ಯವಿರುವ ಕೃಷಿ ಉತ್ಪನ್ನಗಳ ಬಗ್ಗೆ ಅರಿವು ಮೂಡಿಸುತ್ತದೆ. ಇದು ನಗರಗಳ ಜನರಿಗೆ ಕೃಷಿ ಚಟುವಟಿಕೆಯ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ. ಮಾರುಕಟ್ಟೆ ವಿಸ್ತರಣೆಯೂ ಸಾಧ್ಯವಾಗುತ್ತದೆ. ಆ ಭಾಗದ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗುತ್ತದೆ ಎಂದು ಅವರು ಹೇಳಿದರು.ಕೃಷಿ ಪ್ರವಾಸೋದ್ಯಮ ಇಲಾಖೆಯಲ್ಲಿನ ಅನುಕೂಲತೆಗಳು, ಪಾಲಿಸಿ ಬಗ್ಗೆ ತಿಳಿಸಿ, ರೈತರು ಸ್ವಾವಲಂಬಿಯಾಗಿ, ಆರ್ಥಿಕವಾಗಿ ಸಧೃಡವಾಗಲು, ಕೃಷಿ ಪ್ರವಾಸೋದ್ಯಮ ಒಂದು ಒಳ್ಳೆಯ ವಿಧಾನ ಎಂಬುದನ್ನು ಅಂಕಿ ಅಂಶಗಳ ಮೂಲಕ ತಿಳಿಸಿ ಕೊಟ್ಟರು.ಕಾರ್ಯಕ್ರಮ ಉದ್ಘಾಟಿಸಿದ ಹೈದರಾಬಾದ್ ನ, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆಯ (ನಿರ್ವಹಣೆ ಹಾಗೂ ವಿಶ್ಲೇಷಣೆ) ನಿರ್ದೇಶಕ ಡಾ.ಕೆ.ಸಿ. ಗುಮ್ಮಗೋಳ್ಮಠ್ ಕೃಷಿ ಪ್ರವಾಸೋದ್ಯಮ ಹಿನ್ನಲೆ, ಅನುಕೂಲತೆಗಳ ಬಗ್ಗೆ ಕೆಲವು ಉದಾಹರಣೆ ಮೂಲಕ ತಿಳಿಸಿಕೊಟ್ಟರು.ಆಕಾಶವಾಣಿ ಕೃಷಿ ಕಾರ್ಯಕ್ರಮ ನಿರ್ವಾಹಕ ಎನ್. ಕೇಶವಮೂರ್ತಿ ಮಾತನಾಡಿ, ಕೃಷಿ ಪ್ರವಾಸೋದ್ಯಮ ಪರ್ಯಾಯ ಆದಾಯ ಸೃಷ್ಟಿಗೊಂದು ಹೊಸ ಆಯಾಮ ನೀಡುತ್ತದೆ. ಪ್ರವಾಸೋದ್ಯಮ ಇಲಾಖೆ ಇತ್ತೀಚೆಗಿನ ಆಲೋಚನೆಯಾಗಿದ್ದು, ರೈತರು ಕೃಷಿ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು ಪ್ರವಾಸಿಗರಿಗೆ ಸ್ಥಳೀಯವಾಗಿ ಸಿಗುವ ಸೌಲಭ್ಯ ಬಳಸಿಕೊಂಡು ತಾನು ಅಭಿವೃದ್ಧಿಯಾಗಲು ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.ತಿಪಟೂರು ಪ್ರಗತಿಪರ ರೈತ ನವೀನ್ ಅವರು ಅನುಭವ ಹಂಚಿಕೊಂಡರು.ಮುಖ್ಯ ಅತಿಥಿಯಾಗಿದ್ದ ವಿಶ್ವೇಶ್ವರಯ್ಯ ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಎಂ. ಕುಮಾರ್, ಕೃಷಿ ಪ್ರವಾಸೋದ್ಯಮ ಮಹತ್ವವನ್ನು ಅನೇಕ ಉದಾಹರಣೆ ಮೂಲಕ ತಿಳಿಸಿಕೊಟ್ಟರು. ವಿಶ್ವೇಶ್ವರಯ್ಯ ಡೆವಲಪ್ಮೆಂಟ್ ಆರ್ಗನೈಸೇಶನ್ ಅಧ್ಯಕ್ಷ ಡಿ.ಎನ್. ಹರ್ಷ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.