ಮೂವರು ಮನೆಗಳ್ಳರ ಸೆರೆ: ಚಿನ್ನಾ, ಬೆಳ್ಳಿ ವಶ

| Published : Oct 06 2025, 01:00 AM IST

ಸಾರಾಂಶ

ಚನ್ನಪಟ್ಟಣ: ಮನೆಗಳವು ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ೫.೫೦ ಲಕ್ಷ ರು.ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಚನ್ನಪಟ್ಟಣ: ಮನೆಗಳವು ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ೫.೫೦ ಲಕ್ಷ ರು.ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸೆ.೨೮ರಂದು ಗ್ರಾಮಾಂತರ ಠಾಣಾ ಸರಹದ್ದಿನ ಸಾಯಿ ಬಡಾವಣೆಯಲ್ಲಿನ ಮನೆ ಮಾಲೀಕರು ಪಿತೃಪಕ್ಷಕ್ಕೆಂದು ಗ್ರಾಮಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಯಾರು ಇಲ್ಲವೆಂದು ತಿಳಿದ ಗುಜರಾತ್ ಮೂಲದ ಸಂಗಡ ಮುಜುಬಾಯ್, ಮೇಡ ನನ್ನೂಬಾಯ್ ಹಾಗೂ ಕೀಮಾ ಬಾಯ್ ಮೂವರು ಕಳವು ಮಾಡಿದ್ದರು. ಈ ಬಗ್ಗೆ ಮನೆ ಮಾಲೀಕರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಕೈಗೊಂಡ ಪೊಲೀಸರು ಪ್ರಕರಣದ ಜಾಡು ಹಿಡಿದು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಭೇದಿಸಿರುವ ಗ್ರಾಮಾಂತರ ವೃತ್ತ ನಿರೀಕ್ಷಕ ಪ್ರಕಾಶ್, ಆರಕ್ಷಕ ಉಪ ನಿರೀಕ್ಷಕ ಮನೋಹರ್ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ಅಭಿನಂದಿಸಿದ್ದಾರೆ.