ಸಾರಾಂಶ
ದಾಬಸ್‍ಪೇಟೆ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಅಟೋ ನಡುವೆ ಭೀಕರ ಅಪಘಾತ ಸಂಭವಿಸಿ ಅಟೋದಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75 ಕುಣಿಗಲ್ ರಸ್ತೆಯ ನೆಲಮಂಗಲದ ಮಲ್ಲರಬಾಣವಾಡಿ ಕ್ರಾಸ್ ಬಳಿ ಸಂಭವಿಸಿದೆ.

ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿ ಹಾಗೂ ಆಟೋ ಚಾಲಕ ಶ್ರೀನಿವಾಸ್(45), ಪುಟ್ಟಮ್ಮ(55), ವರ್ಷಿಣಿ(13) ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು. ಪುಟ್ಟಮ್ಮ ಮಕ್ಕಳಾದ ವೆಂಕಟೇಶ್ (37), ನಾಗರತ್ನಮ್ಮ (38) ಲೇಖನಾ (11) ಗಾಯಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಶ್ರೀನಿವಾಸ್ ಹಾಗೂ ಆತನ ಸಂಬಂಧಿಗಳಾದ ಪುಟ್ಟಮ್ಮ, ವೆಂಕಟೇಶ್, ನಾಗರತ್ನಮ್ಮ, ವರ್ಷಿಣಿ, ಲೇಖನಾ ಯಶವಂತಪುರ ನಿವಾಸಿಗಳಾಗಿದ್ದಾರೆ.
ಘಟನಾ ವಿವರ: ಕಳೆದೆರಡು ದಿನಗಳ ಹಿಂದೆ ಶುಭ ಸಮಾರಂಭವೊಂದಕ್ಕೆ ಶಾಂತಿನಗರಕ್ಕೆ ವಾಪಸ್ ಹೋಗುವಾಗ ನೆಲಮಂಗಲಕ್ಕೆ ಆಟೋದಲ್ಲಿ ಹೋಗುವ ಮಾರ್ಗ ಮಧ್ಯೆ ಮಲ್ಲರಬಾಣರವಾಡಿ ಕ್ರಾಸ್ ಬಳಿ ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಶ್ರೀನಿವಾಸ್ ಮತ್ತು ಪುಟ್ಟಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು, ವರ್ಷಿಣಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಉಳಿದ ವೆಂಕಟೇಶ್ ಚೇತರಿಕೊಂಡಿದ್ದು, ನಾಗರತ್ನ, ಲೇಖನಾ ಗಂಭೀರ ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೂ ಯಾವ ಹಾನಿಯೂ ಸಂಭವಿಸಿಲ್ಲ.ಘಟನೆ ಬಳಿಕ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಕ್ರೇನ್ ಮೂಲಕ ಆಟೋ ಮತ್ತು ಬಸ್ಸನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಘಟನಾ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೋಟೋ 23 : ಶ್ರೀನಿವಾಸ್
ಪೋಟೋ 24 : ಪುಟ್ಟಮ್ಮಪೋಟೋ 25 : ವರ್ಷಿಣಿ