ಸಾರಾಂಶ
ಬೆಂಗಳೂರಿನ ಸುಮ್ಮನಹಳ್ಳಿ ನಿವಾಸಿಗಳಾದ ಇವರು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸಂಬಂಧಿಕರು ಕಬ್ಬಾಳು ದೇವಾಲಯದಲ್ಲಿ ಇರಿಸಿದ್ದ ದೇವರ ಸೇವೆಯಲ್ಲಿ ಪಾಲ್ಗೊಳ್ಳಲು ಬಂದಿದ್ದರು.
ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ಮರಕ್ಕೆ ಕಾರು ಡಿಕ್ಕಿ ಹೊಡೆದು 3 ಮಂದಿ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದ ಸಮೀಪ ನಡೆದಿದೆ. ಮಧು, ದೀಪು, ಅಭಿ ಮೃತರು. ಘಟನೆಯಲ್ಲಿ ಚಿರು ಹಾಗೂ ಮತ್ತೊಬ್ಬರಿಗೆ ಪೆಟ್ಟಾಗಿದ್ದು, ಗಾಯಾಗಳುಗಳ ಪೈಕಿ ಚಿರು ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೆಂಗಳೂರಿನ ಸುಮ್ಮನಹಳ್ಳಿ ನಿವಾಸಿಗಳಾದ ಇವರು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸಂಬಂಧಿಕರು ಕಬ್ಬಾಳು ದೇವಾಲಯದಲ್ಲಿ ಇರಿಸಿದ್ದ ದೇವರ ಸೇವೆಯಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಊಟ ಮುಗಿಸಿ ಭಾನುವಾರ ಸಂಜೆ ಹಿಂದುರುಗುವಾಗ ಕಬ್ಬಾಳು- ಚನ್ನಪಟ್ಟಣ ರಸ್ತೆಯ ಅಮ್ಮಳ್ಳಿದೊಡ್ಡಿ ಗ್ರಾಮದ ಬಳಿ ಇವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮಧು, ದೀಪು ಮತ್ತು ಅಭಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ವ್ಯಕ್ತಿಗಳ ಶವವನ್ನು ಚಾಮುಂಡೇಶ್ವರಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.ಈ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ತೆರಳಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಪೊಟೋ೪ಸಿಪಿಟಿ೪: ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು.