ಸೋಮೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಸಂಘದಿಂದ 3 ಲಕ್ಷ ರು. ಅನುದಾನ

| Published : Feb 22 2024, 01:48 AM IST / Updated: Feb 22 2024, 01:49 AM IST

ಸೋಮೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಸಂಘದಿಂದ 3 ಲಕ್ಷ ರು. ಅನುದಾನ
Share this Article
  • FB
  • TW
  • Linkdin
  • Email

ಸಾರಾಂಶ

ನುಗ್ಗೇಹಳ್ಳಿ ಹೋಬಳಿಯ ಜಂಬೂರು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ. ವೀರೇಂದ್ರ ಹೆಗಡೆಯವರು 3 ಲಕ್ಷ ರು. ಅನುದಾನವನ್ನು ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಮಾಹಿತಿ । ಜಂಬೂರು ಗ್ರಾಮದ ಆಲಯ

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಹೋಬಳಿಯ ಜಂಬೂರು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ. ವೀರೇಂದ್ರ ಹೆಗಡೆಯವರು 3 ಲಕ್ಷ ರು. ಅನುದಾನವನ್ನು ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು.

ಹೋಬಳಿಯ ಜಂಬೂರು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯಕ್ಕೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರವಣಬೆಳಗೊಳ ಯೋಜನಾ ಕಚೇರಿ ವತಿಯಿಂದ ನೀಡಲಾಗಿದ್ದ 3 ಲಕ್ಷ ರು. ಸಹಾಯಧನದ ಡಿಡಿಯನ್ನು ದೇವಾಲಯ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿ ಮಾತನಾಡಿದರು.

ಡಾ. ವೀರೇಂದ್ರ ಹೆಗಡೆಯವರು ಸಮಾಜದಲ್ಲಿ ಬದಲಾವಣೆ ತರುವ ದೃಷ್ಟಿಯಿಂದ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡುತ್ತ ಬಂದಿದ್ದು ಡೈರಿ ಕಟ್ಟಡ ಶಾಲೆಗಳಲ್ಲಿ ಶೌಚಾಲಯ, ಆಟದ ಮೈದಾನ, ಮೊದಲಾದವುಗಳ ನಿರ್ಮಾಣ, ದೇವಾಲಯಗಳ ಜೀರ್ಣೋದ್ಧಾರ ಸೇರಿದಂತೆ ಅನೇಕ ಜನಸ್ನೇಹಿ ಕೆಲಸಗಳಿಗೆ ಹೆಚ್ಚಿನ ಸಹಾಯ, ಸಹಕಾರ ನೀಡುತ್ತ ಬಂದಿದ್ದಾರೆ. ಗ್ರಾಮದ ಶ್ರೀ ಸೋಮೇಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಅನುದಾನ ನೀಡುವಂತೆ ಹೆಗ್ಗಡೆಯವರಲ್ಲಿ ವಿನಂತಿಸಿದ ಹಿನ್ನೆಲೆಯಲ್ಲಿ ಸುಮಾರು 3 ಲಕ್ಷ ರು. ಹಣವನ್ನು ನೀಡಿದ್ದಾರೆ. ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ, ರೈತರಿಗೆ ಕೃಷಿ ಯಂತ್ರಧಾರೆ ಮೂಲಕ ರಿಯಾಯಿತಿ ದರದಲ್ಲಿ ಯಂತ್ರೋಪಕರಣಗಳನ್ನು ಬಾಡಿಗೆ ನೀಡಲಾಗುತ್ತದೆ. ಇದರ ಜತೆಗೆ ಕೆರೆಗಳ ಪುನಶ್ಚೇತನಕ್ಕಾಗಿ ಹೂಳೆತ್ತುವ ಕೆಲಸವನ್ನು ಕೂಡ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯಗಳ ಬಗ್ಗೆ ವಿವರಿಸಿದರು.

ಗ್ರಾಮದ ಸಮಾಜ ಸೇವಕ ನಾಗಭೂಷಣ್ ಮಾತನಾಡಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ ಮತ್ತು ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣರವರು ದೇವಾಲಯ ಜೀರ್ಣೋದ್ಧಾರಕ್ಕೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಮುಂದೆಯೂ ಅವರ ಸಹಕಾರ ಹೀಗೆ ಮುಂದುವರೆಯಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 3 ಲಕ್ಷ ರು. ಅನುದಾನವನ್ನು ನೀಡಲಾಗಿದೆ. ಇದರಿಂದ ದೇವಾಲಯದ ನಿರ್ಮಾಣ ಕಾರ್ಯಕ್ಕೆ ಹೆಚ್ಚಿನ ಸಹಕಾರ ನೀಡಿದಂತಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಜೆ.ವಿ. ಕೃಷ್ಣಮೂರ್ತಿ, ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಪಿ.ಎಂ. ನರಸಿಂಹಮೂರ್ತಿ, ಉದ್ಯಮಿ ಶಂಕರ್, ಗ್ರಾಮಸ್ಥರಾದ ಎಂಎ ಕುಮಾರಸ್ವಾಮಿ, ಜವರೇಗೌಡ, ಜೆಡಿ ಶಂಕರ್, ಅಣ್ಣಯ್ಯ, ಪಟೇಲ್ ದೇವರಾಜ್, ಮಳಲಿ ಗೌಡ, ಆದಿಚುಂಚನಗಿರಿ ಕುಮಾರ್, ರೇವಣಸಿದ್ದಪ್ಪ, ರಾಜಪ್ಪ, ಜೆ.ಆರ್‌.ಚಂದು, ಶೋಭಾ, ಡೈರಿ ಕಾರ್ಯದರ್ಶಿ ಅಶೋಕ್, ನಿಖಿಲ್ ಕಶಪ್ಪ, ಆರ್.ಶಿಲ್ಪ, ಶುದ್ಧ ಗಂಗಾ ಘಟಕದ ಪ್ರೇರಕ ವೆಂಕಟೇಶ್ ಮೂರ್ತಿ, ನುಗ್ಗೇಹಳ್ಳಿ ವಲಯ ಮೇಲ್ವಿಚಾರಕಿ ಲತಾ, ಸೇವ ಪ್ರತಿನಿಧಿ ಶಿಲ್ಪ, ಯೋಜನೆಯ ಸಿಎಸ್ಸಿ ಸೇವಾ ಕೇಂದ್ರದ ಪೂಜಾ, ಚಂದ್ರಕಲಾ ಮತ್ತು ಗ್ರಾಮಸ್ಥರು ಹಾಜರಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರವಣಬೆಳಗೊಳ ಯೋಜನಾ ಕಚೇರಿ ವತಿಯಿಂದ ನೀಡಲಾಗಿದ್ದ 3 ಲಕ್ಷ ರು. ಸಹಾಯಧನದ ಡಿಡಿಯನ್ನು ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಸೋಮೇಶ್ವರ ದೇವಾಲಯ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿದರು.