ಸಾರಾಂಶ
ರಾಮನಗರ : ಜಿದ್ದಾಜಿದ್ದಿನ ಕಣವಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಹೆಸರಿನ ಮೂವರು ಹಾಗೂ ಮಂಜುನಾಥ್ ಹೆಸರಿನ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯ ಡಾ.ಮಂಜುನಾಥ್ ಮತ್ತು ಕಾಂಗ್ರೆಸ್‌ನ ಡಿ.ಕೆ.ಸುರೇಶ್ ಅವರ ಹೆಸರಿನ ಕುರಿತು ಮತದಾರರಲ್ಲಿ ಗೊಂದಲ ಮೂಡಿಸಿ, ಎದುರಾಳಿಗಳ ವಿರುದ್ಧ ಲಾಭ ಪಡೆಯುವುದಕ್ಕಾಗಿ ಒಂದೇ ರೀತಿಯ ಹೆಸರಿನವರನ್ನು ಕರೆತಂದು ನಾಮಪತ್ರ ಸಲ್ಲಿಸಲಾಗಿದೆ ಎಂಬ ಆರೋಪ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದರೆ, ಅದೇ ಹೆಸರಿನಲ್ಲಿ ಕರುನಾಡು ಪಾರ್ಟಿಯಿಂದ ಆನೇಕಲ್ ತಾಲೂಕಿನ ಮುತ್ತಾನಲ್ಲೂರಿನ ಎಸ್. ಸುರೇಶ್, ಪಕ್ಷೇತರರಾಗಿ ಕನಕಪುರ ತಾಲೂಕಿನ ಮರಳೆ ಗ್ರಾಮದ ಎಂ.ಎನ್ .ಸುರೇಶ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಡಾ.ಸಿ.ಎನ್. ಮಂಜುನಾಥ್ ನಾಮಪತ್ರ ಸಲ್ಲಿಸಿದರೆ, ಚನ್ನರಾಯಪಟ್ಟಣದ ಬಹುಜನ್ ಭಾರತ್ ಪಾರ್ಟಿ ಅಭ್ಯರ್ಥಿಯಾಗಿ ಸಿ.ಎನ್. ಮಂಜುನಾಥ, ಪಕ್ಷೇತರರಾಗಿ ಬೆಂಗಳೂರಿನ ಸಿ.ಮಂಜುನಾಥ್, ಎನ್. ಮಂಜುನಾಥ್ ಹಾಗೂ ಕೆ.ಮಂಜುನಾಥ್ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ.