ಸಾರಾಂಶ
ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುತ್ತಿದ್ದಾಗ ಮೂರು ಹುಲಿಮರಿ ಪತ್ತೆಯಾದ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು-ಬೇಡಗುಳಿ ರಸ್ತೆಯಲ್ಲಿ ನಡೆದಿದೆ. ಎನ್ ಟಿಸಿಎ ಮಾರ್ಗಸೂಚಿ ಅನ್ವಯ ತಾಯಿ ಹುಲಿ ಪತ್ತೆ ಹಾಗೂ ಮರಿಗಳ ನಿಗಾಕ್ಕಾಗಿ ಮೇಲುಸ್ತುವಾರಿ ಸಮಿತಿ ರಚನೆ ಮಾಡಲಾಗಿದೆ. ತಾಯಿ ಹುಲಿ ಪತ್ತೆಗಾಗಿ ಕೂಂಬಿಂಗ್ ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುತ್ತಿದ್ದಾಗ ಮೂರು ಹುಲಿಮರಿ ಪತ್ತೆಯಾದ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು-ಬೇಡಗುಳಿ ರಸ್ತೆಯಲ್ಲಿ ನಡೆದಿದೆ. ಎನ್ ಟಿಸಿಎ ಮಾರ್ಗಸೂಚಿ ಅನ್ವಯ ತಾಯಿ ಹುಲಿ ಪತ್ತೆ ಹಾಗೂ ಮರಿಗಳ ನಿಗಾಕ್ಕಾಗಿ ಮೇಲುಸ್ತುವಾರಿ ಸಮಿತಿ ರಚನೆ ಮಾಡಲಾಗಿದೆ. ತಾಯಿ ಹುಲಿ ಪತ್ತೆಗಾಗಿ ಕೂಂಬಿಂಗ್ ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಅರಣ್ಯ ಇಲಾಖೆ ಸಿಬ್ಬಂದಿ ಎರಡು ಹುಲಿ ಮರಿಗಳು ಅಲೆದಾಡುತ್ತಿದ್ದನ್ನು ಕಂಡಿದ್ದಾರೆ. ಬಳಿಕ, ಗಸ್ತು ಮುಗಿಸಿ ವಾಪಾಸ್ ಆಗುವಾಗಲೂ ಹುಲಿ ಮರಿಗಳು ಅಲೆದಾಡುವುದನ್ನು ಗಮನಿಸಿ ಪರಿಶೀಲಿಸಿದಾಗ ಮತ್ತೊಂದು ಹುಲಿಮರಿ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ, ತಾಯಿ ಹುಲಿ ಕುರುಹು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ವಲಯ ಅರಣ್ಯಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಪತ್ತೆಯಾದ ಹುಲಿಗಳು 30 ದಿನಗಳ ಮರಿಗಳಾಗಿದ್ದು ಪಶು ವೈದ್ಯರು ನಿಗಾ ಇಟ್ಟಿದ್ದಾರೆ, ಕ್ಯಾಮರಾ ಟ್ರಾಪ್ ಕೂಡ ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.