ಸಾರಾಂಶ
ಕೊಪ್ಪಳ: ಸಾಮೂಹಿಕ ವಿವಾಹಗಳನ್ನು ನಡೆಸುವುದರಿಂದ ಆರ್ಥಿಕ ಹೊರ ಕಡಿಮೆಯಾಗುತ್ತದೆ. ಇದು ಮಿತವ್ಯಯಕ್ಕೆ ದಾರಿಯಾಗುತ್ತದೆ ಎಂದು ಶ್ರೀಮರುಳಾರಾದ್ಯ ಶಿವಾಚಾರ್ಯರು ಹೇಳಿದರು.ತಾಲೂಕಿನ ಅಳವಂಡಿ ಗ್ರಾಮದಲ್ಲಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ನವಜೋಡಿಗಳನ್ನು ಮತ್ತು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.ಜನರು ಮಾನಸಿಕ ನೆಮ್ಮದಿ, ಶಾಂತಿ, ಉತ್ಸಾಹ ಹಾಗೂ ಒಗ್ಗಟ್ಟಿನ ಭಾವನೆ ಮೂಡಬೇಕಾದರೆ ಸಾಮೂಹಿಕ ವಿವಾಹ, ಧಾರ್ಮಿಕ ಸಭೆ, ಸಂಗೀತ, ಪ್ರವಚನ, ಅಧ್ಯಾತ್ಮ ಮುಂತಾದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದರು.ನಂತರ 16 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆದವು. ಬೆಳಿಗ್ಗೆ ಶ್ರೀಸಿದ್ದೇಶ್ವರ ಮೂರ್ತಿಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು, ಭಕ್ತರು ದೇವರಿಗೆ ಕಾಯಿ, ಕರ್ಪೂರ, ನೈವೇದ್ಯ ಸಲ್ಲಿಸಿ ಭಕ್ತಿ ಸಮರ್ಪಿಸಿದರು.ಜಾತ್ರೆ ಅಂಗವಾಗಿ ದೇವಸ್ಥಾನವನ್ನು ತಳಿರು-ತೋರಣ, ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಸುತ್ತಮುತ್ತಲ ಜಿಲ್ಲೆಗಳ ಭಕ್ತರು ಜಾತ್ರೆಗೆ ಎತ್ತಿನ ಬಂಡಿ ಹಾಗೂ ವಿವಿಧ ವಾಹನಗಳಲ್ಲಿ ಆಗಮಿಸುತ್ತಿರುವುದು ಕಂಡು ಬಂತು.