ಸಾರಾಂಶ
ಸಿಂಧನೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ. ಬೇರೆಯವರಿಗೆ ಟಿಕೆಟ್ ನೀಡಿದರೆ ಅವರ ಗೆಲುವಿಗೆ ಶ್ರಮಿಸುತ್ತೇನೆ. ಯಾವುದಕ್ಕೂ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.
ಶುಕ್ರವಾರ ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ ಪಕ್ಷದ ಸರ್ವೇ ಪ್ರಕಾರ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತದೆ.
ಪ್ರಧಾನಿ ಮೋದಿಯವರ ಅಲೆಯು ಈ ಬಾರಿ ಹೆಚ್ಚು ಕೆಲಸ ಮಾಡಲಿದೆ. ಎರಡು ಬಾರಿ ಕೊಪ್ಪಳ ಕ್ಷೇತ್ರದ ಸಂಸದನಾಗಿ ಕೆಲಸ ಮಾಡಿದ್ದೇನೆ. ಈ ಬಾರಿಯು ಪಕ್ಷ ನನ್ನನ್ನು ಗುರುತಿಸಿ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ.
ಒಂದು ವೇಳೆ ಬಿಜೆಪಿ ಮುಖಂಡ ಕೆ.ಕರಿಯಪ್ಪ ಸೇರಿದಂತೆ ಯಾರಿಗೆ ಟಿಕೆಟ್ ಕೊಟ್ಟರು ಸಹ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.
ಇದೇ ಜ.31ರಂದು ರೈಲ್ವೆ ಇಲಾಖೆ ಪ್ರಾದೇಶಿಕ ಅಧಿಕಾರಿಗಳು ರೈಲ್ವೆ ಹಳಿ ಪರಿಶೀಲನೆ ನಡೆಸಿ ನೀಡುವ ವರದಿಯ ಆಧಾರದ ಮೇಲೆ ಸಿಂಧನೂರಿನಿಂದ ರೈಲ್ವೆ ಸಂಚಾರ ಆರಂಭಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆ ಕರಿಯಪ್ಪ. ಪಿಕಾರ್ಡ ಬ್ಯಾಂಕ ಅಧ್ಯಕ್ಷ ಎಂ.ದೊಡ್ಡಬಸವರಾಜ, ಜಿ.ಪಂ. ಮಾಜಿ ಸದಸ್ಯ ಅಮರೇಗೌಡ ವಿರುಪಾಪುರ, ತಾಲೂಕಾಧ್ಯಕ್ಷ ನಿರುಪಾದೆಪ್ಪ ಜೋಳದರಾಶಿ, ಗ್ರಾಮೀಣ ಘಟಕ ಅಧ್ಯಕ್ಷ ಹನುಮೇಶ ಸಾಲ್ಗುಂದಾ, ಸಿದ್ದರಾಮೇಶ ಮನ್ನಾಪುರ, ಮಲ್ಲಿಕಾರ್ಜುನ ಜಿನೂರ್, ರವಿ ರಾಠೋಡ್ ಇದ್ದರು.