ಸಾರಾಂಶ
ಎಂ.ಜಿ ಮೂಳೆಗೆ ಅವರಿಗೆ ಎಂಎಲ್‌ಸಿ ಟಿಕೇಟ್ ಘೋಷಿಸಿದಕ್ಕೆ ಬಸವಕಲ್ಯಾಣದಲ್ಲಿ ಬಿಜೆಪಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಬಸವಕಲ್ಯಾಣ: ಮಾಜಿ ಶಾಸಕರು ಹಾಗೂ ಬಿಜೆಪಿ ಮುಖಂಡರಾದ ಎಂ.ಜಿ ಮೂಳೆ ಅವರಿಗೆ ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ಜೂ.13ರಂದು ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ ಸಿಕ್ಕಿರುವುದಕ್ಕೆ ಶಾಸಕ ಶರಣು ಸಲಗರ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ವೇಳೆ ಶಾಸಕರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಅಮೀತ ಷಾ, ಬಿ.ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರನ್ನು ಅಭಿನಂದಿಸಿ ಇದೊಂದು ಉತ್ತಮ ಆಯ್ಕೆಯಾಗಿದ್ದು ಗಡಿ ಭಾಗ ಬೀದರ್ ಜಿಲ್ಲೆಯ ಮರಾಠ ಜನಾಂಗಕ್ಕೆ ಹಾಗೂ ಜಿಲ್ಲೆ ಜನರಿಗೆ ಸಂತೋಷ ತಂದಿದೆ ಎಂದರು. ತಾಲೂಕು ಬಿಜೆಪಿ ಪದಾಧಿಕಾರಿಗಳು ಶಾಸಕರು ಬಸವಕಲ್ಯಾಣ ಪಟ್ಟಣದ ಡಾ.ಅಂಬೇಡ್ಕರ ವೃತ್ತದಲ್ಲಿ ಸೇರಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆ ತಾಲೂಕು ಬಿಜೆಪಿ ಗ್ರಾಮೀಣ ಅಧ್ಯಕ್ಷ ಅಶೋಕ ವಕಾರೆ, ನಗರ ಅಧ್ಯಕ್ಷ ಅರವಿಂದ ಮುತ್ತೆ, ಸೂರ್ಯಕಾಂತ ಚಿಲ್ಲಾಬಟ್ಟೆ, ಬಸವರಾಜ ಮೂಲಗೆ ಮುಂತಾದ ನೂರಾರು ಜನ ಕಾರ್ಯಕರ್ತರು ಭಾಗವಹಿಸಿ ಸಂಭ್ರಮಿಸಿದರು.