ಸಾರಾಂಶ
ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿ ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಕೈಗೆತ್ತಿಕೊಂಡು ಸಂಬಂಧಿಸಿದ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಿ ಸಮಗ್ರ ವರದಿ ನಂತರ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯಿಸಿದ್ದಾರೆ.
ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯ
ಕನ್ನಡಪ್ರಭ ವಾರ್ತೆ ಹನೂರುಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿ ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಕೈಗೆತ್ತಿಕೊಂಡು ಸಂಬಂಧಿಸಿದ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಿ ಸಮಗ್ರ ವರದಿ ನಂತರ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಎಂ.ಆರ್. ಮಂಜುನಾಥ್ ಒತ್ತಾಯಿಸಿದ್ದಾರೆ.
ತಾಲೂಕಿನ ಮಲೆಯ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಬಪ್ಪರ್ ಜೋನ್ ವಲಯದ ಪಚ್ಚೆದೊಡ್ಡಿ ವನ್ಯಜೀವಿ ವಿಭಾಗದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಹುಲಿ ಕಳೆಬರಹ ಕಂಡುಬಂದಿದೆ. ತಾಲೂಕಿನಲ್ಲಿ ಹುಲಿ ಸಾವನ್ನಪ್ಪಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸೂಕ್ತ ತನಿಖೆ ನಡೆಸಿ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಿ ಸಾವಿಗೆ ನಿಖರವಾದ ಸಮಗ್ರ ವರದಿಯನ್ನು ನೀಡುವಂತೆ ಇದೆ ವೇಳೆಯಲ್ಲಿ ಒತ್ತಾಯಿಸಿದರು.ಕಾಡು ಪ್ರಾಣಿಗಳ ಸಾವು ಆತಂಕಕಾರಿ ಬೆಳವಣಿಗೆ:
ಹನೂರು ತಾಲೂಕಿನಲ್ಲಿ ಹೂಗ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಸೇರಿದಂತೆ ನಾಲ್ಕು ಮರಿಗಳು ಸತ್ತ ಪ್ರಾಣಿಯ ವಿಷಪ್ರಾಸನದ ಮಾಂಸ ತಿಂದು ಸಾವನ್ನಪ್ಪಿದ್ದು ಜೊತೆಗೆ ಕಾವೇರಿ ವನ್ಯ ಧಾಮದಲ್ಲಿ ಇತ್ತೀಚೆಗೆ ಎರಡು ಹುಲಿ ಮರಿಗಳು ಸಹ ಆಹಾರ ಇಲ್ಲದೆ ಸಾವನ್ನಪ್ಪಿವೆ. ಜೊತೆಗೆ ತಾಲೂಕಿನಲ್ಲಿ ಇತ್ತೀಚೆಗೆ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳು ಚಿರತೆ ಸೇರಿದಂತೆ ಇತರ ಪ್ರಾಣಿಗಳು ಸಹ ಸಾವನ್ನಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹೀಗಾಗಿ ಸರ್ಕಾರ ಗಂಭೀರವಾಗಿ ಪ್ರಕರಣವನ್ನು ಪರಿಗಣಿಸಿ ಅರಣ್ಯ ಇಲಾಖೆ ಸಚಿವರು ಹಾಗೂ ಹಿರಿಯ ಅರಣ್ಯಾಧಿಕಾರಿಗಳು ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಸಾವಿನ ಬಗ್ಗೆ ನಿಖರವಾದ ವರದಿಯನ್ನು ನೀಡಬೇಕು. ಮುಂದೆ ತಾಲೂಕಿನಲ್ಲಿ ಕಾಡು ಪ್ರಾಣಿಗಳು ಜೀವ ಕಳೆದುಕೊಳ್ಳುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹುಲಿಯ ತಲೆ ಭುಜ ಮುಂಗಾಲುಗಳು ಪತ್ತೆಯಾಗಿದೆ ಉಳಿದ ಭಾಗಗಳು ಸಿಕ್ಕಿಲ್ಲ. ಅರಣ್ಯ ಇಲಾಖೆಗೆ ಸಿಕ್ಕಿರುವ ಕಳೆಬರಹದಲ್ಲಿ ಉಗುರುಗಳು ಮತ್ತು ಹಲ್ಲುಗಳು ಇದ್ದು ಇನ್ನು ಉಳಿದ ಭಾಗವನ್ನು ಹುಡುಕಲು ಅರಣ್ಯಾಧಿಕಾರಿಗಳು ಕ್ರಮ ವಹಿಸಬೇಕು. ಕಳ್ಳ ಬೇಟೆಯ ಪ್ರಕರಣ ಎಂದು ಪರಿಗಣಿಸಿ ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.