ಹುಲಿಯೊಂದು ಬೆಮೆಲ್ ಕಾರ್ಖಾನೆಯ ಕಾಂಪೌಂಡ್ ಜಿಗಿಯುತ್ತಿರುವ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಕಾರ್ಖಾನೆಯ ಆವರಣದಲ್ಲಿ ಹುಲಿ ಕಾಣಿಸಿಕೊಂಡಿತ್ತು.
ಮೈಸೂರುನಗರದ ಹೊರವಲಯದಲ್ಲಿರುವ ಬೆಮಲ್ ಕಾರ್ಖಾನೆ ಬಳಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು, ನೌಕರರು ಮತ್ತು ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.ಹುಲಿಯೊಂದು ಬೆಮೆಲ್ ಕಾರ್ಖಾನೆಯ ಕಾಂಪೌಂಡ್ ಜಿಗಿಯುತ್ತಿರುವ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಕಾರ್ಖಾನೆಯ ಆವರಣದಲ್ಲಿ ಹುಲಿ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ ಕೂಂಬಿಂಗ್ ನಡೆಸಿದಾಗ ಹುಲಿ ಪತ್ತೆಯಾಗಿರಲಿಲ್ಲ. ಈಗ ಮತ್ತೆ ಹುಲಿ ಕಾಣಿಸಿಕೊಂಡಿದ್ದರಿಂದ ಹುಲಿ ಸೆರೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲಸು ತಿಳಿಸಿದ್ದಾರೆ.