ಅಕ್ರಮ ತಡೆಗೆ ಬಿಗಿ ಭದ್ರತೆ: ಸಿಇಒ ಗೋಪಾಲಕೃಷ್ಣ

| Published : Apr 14 2024, 01:49 AM IST

ಸಾರಾಂಶ

ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಚುನಾವಣಾ ನಿರ್ವಹಣ ತಂಡ ಹಗಲು ರಾತ್ರಿ ಚುರುಕಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಚೆಕ್‍ ಪೋಸ್ಟ್‌ಗಳಲ್ಲಿ ತಪಾಸಣೆ ಸಂಪೂರ್ಣ ಬಿಗಿ ಮಾಡಲಾಗಿದೆ.

ಕೊಟ್ಟಿಗೆಹಾರ: ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಚುನಾವಣಾ ನಿರ್ವಹಣ ತಂಡ ಹಗಲು ರಾತ್ರಿ ಚುರುಕಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಚೆಕ್‍ ಪೋಸ್ಟ್‌ಗಳಲ್ಲಿ ತಪಾಸಣೆ ಸಂಪೂರ್ಣ ಬಿಗಿ ಮಾಡಲಾಗಿದೆ.

ಜಿಪಂ ಸಿಇಒ ಡಾ. ಗೋಪಾಲಕೃಷ್ಣ ಅವರು ತಾಲೂಕಿನ ಬಸ್ಕಲ್, ಕಿರುಗುಂದ, ಕೊಟ್ಟಿಗೆಹಾರ, ಕಸ್ಕೇಬೈಲ್ ಮತ್ತು ಕುದುರೆಮುಖ ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನ ಎಲ್ಲಾ ಚೆಕ್‍ ಪೋಸ್ಟ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಇಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳು ಮೂಡಿಗೆರೆ ಸಹಾಯಕ ಚುನಾವಣಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ, ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿಯೇ ನೇರವಾಗಿ ವೀಕ್ಷಿಸಲಾಗುತ್ತದೆ. ಹಾಗಾಗಿ ಚೆಕ್‍ಪೋಸ್ಟ್‌ಗಳಲ್ಲಿ ಪಾರದರ್ಶಕ ತಪಾಸಣೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ ಚೆಕ್‍ಪೋಸ್ಟ್ ಮಾತ್ರವಲ್ಲ. 25 ಸೆಕ್ಟರ್ ಅಧಿಕಾರಿ, 4 ಪ್ಲೈಯಿಂಗ್ ಸ್ಕ್ವಾಡ್, ವಿಎಸ್‍ಟಿ, ವಿವಿಟಿ, ಅಕೌಂಟಿಂಗ್ ತಂಡ ಕಾರ್ಯ ನಿರ್ವಹಿಸುತ್ತಿದ್ದು, ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮೂಡಿಗೆರೆ ತಾಪಂ ಕಾರ್ಯನಿರ್ವಹಕ ಅಧಿಕಾರಿ ದಯಾವತಿ ಉಪಸ್ಥಿತರಿದ್ದರು. ಪೋಟೋ ಫೈಲ್‌ ನೇಮ್‌ 13 ಕೆಸಿಕೆಎಂ 2ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ಗೆ ಜಿ.ಪಂ. ಸಿಇಓ ಡಾ. ಗೋಪಾಲಕೃಷ್ಣ ಭೇಟಿ ನೀಡಿ ಪರಿಶೀಲಿಸಿದರು.