ಸಾರಾಂಶ
ಹಿರಿಯೂರು ನಗರದ ರೀಜನಲ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಹಿರಿಯೂರು
ವಿದ್ಯಾರ್ಥಿ ಜೀವನದಲ್ಲಿ ಸಮಯ ಅತೀ ಮುಖ್ಯವಾಗಿದ್ದು ಇಂದಿನ ವಿದ್ಯಾರ್ಥಿಗಳು ಸಮಯ ಹಾಳು ಮಾಡದೇ ಅಭ್ಯಾಸದತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ರೀಜನಲ್ ಶಾಲೆಯ ಅಧ್ಯಕ್ಷ ಅಪಾಕ್ ಅಹಮ್ಮದ್ ಹೇಳಿದರು.ನಗರದ ರೀಜನಲ್ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇಂದಿನ ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಶಿಕ್ಷಣವಂತರಾಗುವುದು ಅತ್ಯಂತ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳು ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವ ಜೊತೆಗೆ ಸಮಯ ವ್ಯರ್ಥ ಮಾಡದೇ ಅಭ್ಯಾಸದ ಕಡೆಗೆ ಹೆಚ್ಚುಗಮನ ಹರಿಸಬೇಕು ಎಂದು ಹೇಳಿದರು.ಮಾರ್ಚ್ 21ರಂದು ಎಸ್ಎಸ್ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಸತತ ಪರಿಶ್ರಮವಹಿಸಿ ಓದುವ ಮೂಲಕ ಪರೀಕ್ಷೆಗೆ ಸಿದ್ಧರಾಗಬೇಕು. ಯಾವುದೇ ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆದು ಪೋಷಕರಿಗೆ ಹಾಗೂ ಓದಿದ ಶಾಲೆಗೆ ಕೀರ್ತಿ ತರಬೇಕು ಎಂದು ಹೇಳಿದರು. ಈ ವೇಳೆ ರೀಜನಲ್ ಶಾಲೆಯ ವ್ಯವಸ್ಥಾಪಕ ಕೆ.ಇರ್ಫಾನ್ ಉಲ್ಲಾ, ಮುಖ್ಯ ಶಿಕ್ಷಕಿ ಶಹಜಾದಿ ಬಿ ಹಾಗೂ ಶಿಕ್ಷಕ-ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.