ಸಾರಾಂಶ
ಮೂಡಿಗೆರೆಯಿಂದ ಚಾರ್ಮಾಡಿ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಶನಿವಾರ ಮುಂಜಾನೆ ನಸುಕಿನಲ್ಲಿ ಮಂಜುಕವಿದ ವಾತಾವರಣದಿಂದ ದಾರಿ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಸುಮಾರ ಎರಡು ಸಾವಿರ ಅಡಿ ಪ್ರಪಾತಕ್ಕೆ ಉರುಳಿದ ಪರಿಣಾಮ ಲಾರಿ ಸಂಪೂರ್ಣ ಜಖಂಗೊಂಡಿದೆ. ಚಾಲಕನಿಗೆ ಸೊಂಟಕ್ಕೆ ಪೆಟ್ಟಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕನ್ನಡಪ್ರಭ ವಾರ್ತೆ, ಕೊಟ್ಟಿಗೆಹಾರ
ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಟಿಪ್ಪರ್ ಪ್ರಪಾತಕ್ಕೆ ಉರುಳಿ ಚಾಲಕನಿಗೆ ಗಾಯವಾಗಿದ್ದು ಪ್ರಾಣಾಪಾಯ ದಿಂದ ಪಾರಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.ಮೂಡಿಗೆರೆಯಿಂದ ಚಾರ್ಮಾಡಿ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಶನಿವಾರ ಮುಂಜಾನೆ ನಸುಕಿನಲ್ಲಿ ಮಂಜುಕವಿದ ವಾತಾವರಣದಿಂದ ದಾರಿ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಸುಮಾರ ಎರಡು ಸಾವಿರ ಅಡಿ ಪ್ರಪಾತಕ್ಕೆ ಉರುಳಿದ ಪರಿಣಾಮ ಲಾರಿ ಸಂಪೂರ್ಣ ಜಖಂಗೊಂಡಿದೆ. ಚಾಲಕನಿಗೆ ಸೊಂಟಕ್ಕೆ ಪೆಟ್ಟಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ, ಪೊಲೀಸ್ ಸಿಬ್ಬಂದಿ ಅಭಿಷೇಕ್, ಗಸ್ತು ಅರಣ್ಯಾಧಿಕಾರಿ ಅಭಿಜಿತ್, ಸಮಾಜ ಸೇವಕ ಮೊಹಮ್ಮದ್ ಆರೀಫ್ ಸ್ಥಳಕ್ಕೆ ಭೇಟಿ ನೀಡಿದ್ದರು.ಎರಡನೇ ಅಪಘಾತ:
ಚಾರ್ಮಾಡಿ ಘಾಟಿಯ ಪ್ರಪಾತದಲ್ಲಿ ಕೆಲವು ತಿಂಗಳ ಹಿಂದೆ ಬಾಟಲ್ ನೀರು ತುಂಬಿದ ಲಾರಿ ಬಿದ್ದಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆ ಸ್ಥಳಕ್ಕೆ ಮೆಟಲ್ ಕ್ರಾಸ್ ಬೇರಿಯರ್ ಹಾಕಿದ್ದರು. ಅದೇ ಸ್ಥಳಕ್ಕೆ ಮತ್ತೇ ಟಿಪ್ಪರ್ ಲಾರಿ ಬಿದ್ದು ಅವಘಡ ಸಂಭವಿಸಿದೆ. ಅಪಘಾತ ವಲಯಕ್ಕೆ ಅಭದ್ರತೆಯಿದ್ದು ಸಂಬಂಧಿಸಿದ ಅಧಿಕಾರಿಗಳು ಈ ಸ್ಥಳಕ್ಕೆ ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.13 ಕೆಸಿಕೆಎಂ 5
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಶನಿವಾರ ಪ್ರಪಾತಕ್ಕೆ ಬಿದ್ದಿರುವ ಟಿಪ್ಪರ್ ಲಾರಿ.