ಪುತ್ತೂರು ಬಿಜೆಪಿಯಿಂದ ತಿರಂಗಾ ಅಭಿಯಾನ

| Published : Aug 14 2024, 01:00 AM IST

ಸಾರಾಂಶ

ಗಾಂಧಿಕಟ್ಟೆಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮತ್ತು ಕಿಲ್ಲೆ ಮೈದಾನದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅಭಿಯಾನ ಸಮಾಪನಗೊಳಿಸಲಾಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಸ್ವಾತಂತ್ರ‍್ಯ ದಿನಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಪೂರಕವಾಗಿ ಪುತ್ತೂರು ಬಿಜೆಪಿ ಸಮಿತಿ ವತಿಯಿಂದ ಮಂಗಳವಾರ ತಿರಂಗಾ ಅಭಿಯಾನ ನಡೆಸಲಾಯಿತು.

ರಾಷ್ಟ್ರಧ್ವಜದೊಂದಿಗೆ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿಯಿಂದ ಹೊರಟು ಮುಂದೆ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರ ಪ್ರತಿಮೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಹಾರಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಗಾಂಧಿಕಟ್ಟೆಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮತ್ತು ಕಿಲ್ಲೆ ಮೈದಾನದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅಭಿಯಾನ ಸಮಾಪನಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಜಯಶ್ರೀ ಎಸ್. ಶೆಟ್ಟಿ, ನಿತೀಶ್ ಕುಮಾರ್ ಶಾಂತಿವನ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ರಾಜ್ಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ಆರ್.ಸಿ. ನಾರಾಯಣ, ತಿರಂಗಾ ಅಭಿಯಾನ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ ಮತ್ತು ಯುವರಾಜ್ ಪೆರಿಯತ್ತೋಡಿ, ನಗರಸಭಾ ಸದಸ್ಯರಾದ ಭಾಮಿ ಅಶೋಕ್ ಶೆಣೈ, ವಿದ್ಯಾ ಆರ್. ಗೌರಿ, ಗೌರಿ ಬನ್ನೂರು, ಮುಖಂಡರಾದ ಎಸ್. ಅಪ್ಪಯ್ಯ ಮಣಿಯಾಣಿ, ಉಮೇಶ್ ಶೆಣೈ, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಜೇಶ್ ಬನ್ನೂರು, ಉಮೇಶ್ ಕೋಡಿಬೈಲು, ಉದಯ, ರಾಧಾಕೃಷ್ಣ ನಂದಿಲ, ಮುರಳಿಕೃಷ್ಣ ಹಸಂತಡ್ಕ, ಹರೀಶ್ ಬಿಜತ್ರೆ ಮತ್ತಿತರರು ಪಾಲ್ಗೊಂಡರು.