ಉಳ್ಳಾಲ: ಭಾರತ ದೇಶದ ಸಿದ್ಧಾಂತ ನಿರೂಪಿಸುವ ತಿರಂಗಾ ಧ್ವಜವು ತ್ಯಾಗ,ಶಾಂತಿ,ಪ್ರಗತಿಯ ಸಂಕೇತವಾಗಿದೆ.ಇಂತಹ ಧ್ವಜಕ್ಕೆ ಗೌರವ ಸಲ್ಲಿಸುವ ಸಲುವಾಗಿ ಹರ್ ಘರ್ ತಿರಂಗ ಹಾಗೂ ಪ್ರತೀ ವಿದಾನಸಭಾ ಕ್ಷೇತ್ರಗಳಲ್ಲೂ ತಿರಂಗ ಯಾತ್ರೆಯನ್ನು ನಡೆಸುವ ಪರಿಕಲ್ಪನೆಗೆ ಪ್ರಧಾನಿ ನರೇಂದ್ರ ಮೋದಿಯವರೇ ಪ್ರೇರಣೆಯಾಗಿದ್ದು ಅವರ ನೇತೃತ್ವದಲ್ಲಿ ಭಾರತವು ವಿಶ್ವಗುರು ಸ್ಥಾನಕ್ಕೇರಲಿದೆಯೆಂದು ಮಾಜಿ ವಿದಾನಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ ಹೇಳಿದರು.
ಎಂಭತ್ತನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮಂಗಳೂರು ವಿದಾನಸಭಾ ಕ್ಷೇತ್ರದ ತಿರಂಗಾ ಯಾತ್ರೆ ಸಮಿತಿ ವತಿಯಿಂದ ಮಂಗಳವಾರ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ತೊಕ್ಕೊಟ್ಟು ಕೇಂದ್ರ ಬಸ್ಸು ನಿಲ್ದಾಣದವರೆಗೆ ನಡೆದ ಬೃಹತ್ ತಿರಂಗಾ ಯಾತ್ರೆಯನ್ನುದ್ಧೇಶಿಸಿ ಅವರು ಮಾತನಾಡಿದರು.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಆ.13 ರಂದು ಎಲ್ಲರ ಮನೆಯಲ್ಲೂ ತಿರಂಗ ಧ್ವಜವನ್ನು ಹಾರಿಸುವ ಮೂಲಕ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಬೇಕೆನ್ನುವ ನಿಟ್ಟಿನಲ್ಲಿ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲೂ ತಿರಂಗ ಯಾತ್ರೆಯನ್ನು ನಡೆಸಲಾಗಿದೆ ಎಂದರು.
ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ ಆಳ್ವ ಕುವೆತ್ತಬೈಲು ಮಾತನಾಡಿದರು. ಕಾರ್ಗಿಲ್ ಯೋಧ ಪ್ರವೀಣ್ ಶೆಟ್ಟಿ ಪಿಲಾರು ಅವರು ತಿರಂಗಾ ಯಾತ್ರೆಗೆ ಚಾಲನೆ ನೀಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು,ಪೂಜಾ ಪೈ, ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ,ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚ ಅಧ್ಯಕ್ಷರಾದ ಮಹೇಶ್ ಜೋಗಿ,ಯುವಮೋರ್ಚ ಜಿಲ್ಲಾ ಉಪಾಧ್ಯಕ್ಷರಾದ ನಿಶಾನ್ ಪೂಜಾರಿ,ಕ್ಷೇತ್ರಾಧ್ಯಕ್ಷ ಮುರಳಿ ಕೊಣಾಜೆ,ಸೋಮೇಶ್ವರ ಪುರಸಭಾ ಉಪಾಧ್ಯಕ್ಷರಾದ ರವಿಶಂಕರ ಸೋಮೇಶ್ವರ,ಮಹಿಳಾ ಮೋರ್ಚಾದ ಮಂಡಲ ಅಧ್ಯಕ್ಷೆ ಮಾಧವಿ ಉಳ್ಳಾಲ್,ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಶೆಟ್ಟಿ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಹರೀಶ್ ಅಂಬ್ಲಮೊಗರು,ಮುಖಂಡರಾದ ಚಂದ್ರಶೇಖರ ಉಚ್ಚಿಲ್, ರವಿ ರೈ ಪಜೀರು, ಯಶವಂತ ಅಮೀನ್, ಜಯಶ್ರೀ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ರಾಜ್ ಕೆ. ಆರ್ ಸ್ವಾಗತಿಸಿ,ದಯಾನಂದ ತೊಕ್ಕೊಟ್ಟು ವಂದಿಸಿದರು.