ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಮೇ 22 ರಂದು ತಿರಂಗಾ ಯಾತ್ರೆ: ಎಸ್.ಪಿ.ಸ್ವಾಮಿ

| Published : May 20 2025, 11:54 PM IST

ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಮೇ 22 ರಂದು ತಿರಂಗಾ ಯಾತ್ರೆ: ಎಸ್.ಪಿ.ಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾಶ್ಮೀರದ ಪಹಲ್ಗಾಂ ದಾಳಿಗೆ ಪ್ರತಿ ದಾಳಿಯಾಗಿ ಭಾರತವು ಆಪರೇಷನ್ ಸಿಂದೂರ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ಮತ್ತು ನಮ್ಮ ಹೆಮ್ಮೆಯ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಬಿಜೆಪಿ ಹಾಗೂ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಮದ್ದೂರು ಪಟ್ಟಣದಲ್ಲಿ ಮೇ 21ರಂದು ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಕಾಶ್ಮೀರದ ಪಹಲ್ಗಾಂ ದಾಳಿಗೆ ಪ್ರತಿ ದಾಳಿಯಾಗಿ ಭಾರತವು ಆಪರೇಷನ್ ಸಿಂದೂರ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ಮತ್ತು ನಮ್ಮ ಹೆಮ್ಮೆಯ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಬಿಜೆಪಿ ಹಾಗೂ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಪಟ್ಟಣದಲ್ಲಿ ಮೇ 21ರಂದು ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಂಗಳವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟ್ಟಣದ ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಕೋಟೆ ಬೀದಿಯ ಶ್ರೀಉಗ್ರ ನರಸಿಂಹ ಸ್ವಾಮಿ ದೇವಾಲಯದವರೆಗೆ ತಿರಂಗಾ ಯಾತ್ರೆ ನಡೆಯಲಿದೆ ಎಂದರು.

ರಾಷ್ಟ್ರ ರಕ್ಷಣೆಗಾಗಿ ನಾವೆಲ್ಲರೂ ಒಂದೇ ಎಂಬ ಘೋಷವಾಕ್ಯದೊಂದಿಗೆ ಯಾತ್ರೆ ನಡೆಯಲಿದೆ. ಯಾತ್ರೆ ನಂತರ ದೇವಾಲಯದ ಆವರಣದಲ್ಲಿ ಬಿಜೆಪಿ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಬೃಹತ್ ಬಹಿರಂಗ ಸಭೆ ನಡೆಯಲಿದೆ ಎಂದರು.

ಪಾಹಲ್ಗಾಂನಲ್ಲಿ ಸುಮಾರು 25 ಜನ ಪ್ರವಾಸಿಗಳನ್ನು ಉಗ್ರರ ಹತ್ಯೆ ಮಾಡಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಪ್ರಧಾನಿ ನರೇಂದ್ರ ಮೋದಿ ಆಪರೇಷನ್ ಸಿಂದೂರದ ಮೂಲಕ ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಉಗ್ರರ ನೆಲೆಯನ್ನು ಧ್ವಂಸಗೊಳಿಸುವ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲರಾಜು, ಕುಮಾರ್, ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಕದಲೂರು ಯೋಗಾನಂದ, ತಾಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ಸುಧೀರ್ ಕುಮಾರ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ವಿ.ಸಿ.ಉಮಾ ಶಂಕರ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಅಶೋಕ್, ಜಿಪಂ ಮಾಜಿ ಸದಸ್ಯ ಬೋರಯ್ಯ, ಅರ್ಚಕರ ರಾಘವೇಂದ್ರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಕೈಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ

ಮದ್ದೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ತಾಲೂಕಿನ ಸೋಮನಹಳ್ಳಿಯಲ್ಲಿ 2025-26 ನೇ ಸಾಲಿನಲ್ಲಿ 11 ವೃತ್ತಿ ಘಟಕಗಳಿಗೆ ಐ.ಟಿ.ಐ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 28 ಕಡೆ ದಿನ. ಎಸ್ಸೆಸ್ಸೆಲ್ಸಿ ತೇರ್ಗಡೆಯಾಗಿರುವ 14 ವರ್ಷ ತುಂಬಿರುವ ಅಭ್ಯರ್ಥಿಗಳು www.cite.karnataka.gov.in ವೆಬ್ ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಅಥವಾ ದೂ.ಸಂ: 08232-298117, ಮೊ-9844703800, ಮೊ-9844770927, ಮೊ-9964030902 ಅನ್ನು ಸಂಪರ್ಕಿಸಬಹುದು ತರಬೇತಿ ಸಂಸ್ಥೆ ಪ್ರಾಚಾರ್ಯರು ತಿಳಿಸಿದ್ದಾರೆ.