ತಿರುಪತಿ ಲಡ್ಡು ಪ್ರಸಾದ ಹಗರಣ, ಮೋದಿ ಅವರೇ ತನಿಖೆ ನಡೆಸಲಿ: ರಮೇಶ್‌ ಕಾಂಚನ್ ಆಗ್ರಹ

| Published : Sep 24 2024, 01:45 AM IST

ತಿರುಪತಿ ಲಡ್ಡು ಪ್ರಸಾದ ಹಗರಣ, ಮೋದಿ ಅವರೇ ತನಿಖೆ ನಡೆಸಲಿ: ರಮೇಶ್‌ ಕಾಂಚನ್ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಏನೇ ಘಟನೆಗಳು ನಡೆದರೂ ತಕ್ಷಣ ಟ್ವೀಟ್‌ ಮೂಲಕ ಪ್ರತಿಕ್ರಿಯಿಸುವ ಮೋದಿ ಅವರು ತಿರುಪತಿಯ ಲಡ್ಡು ವಿವಾದದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಇದು ಸಂಶಯಕ್ಕೆ ಕಾರಣವಾಗುತ್ತಿದೆ ಎಂದು ಕಾಂಚನ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೂಕ್ತ ತನಿಖೆ ನಡೆಸಿ ದೇಶದ ಜನತೆಗೆ ಸತ್ಯ ತಿಳಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.ಕಳೆದ ಎರಡು ಅವಧಿಯಲ್ಲಿ ಎನ್‌ಡಿಎ ಮಿತ್ರಪಕ್ಷವಾಗಿರುವ ವೈ.ಎಸ್.ಆರ್. ಪಕ್ಷದ ಮುಖ್ಯಮಂತ್ರಿಯಾಗಿದ್ದ ಜಗನ್ ಮೋಹನ್ ರೆಡ್ಡಿ ಸರ್ಕಾರದಿಂದ ಈ ಹಗರಣ ನಡೆದಿದೆ ಎಂದು ಹಾಲಿ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ಇಂತಹ ಗಂಭೀರ ಹಗರಣ ನಡೆದಿರುವಾಗ ಹಿಂದುತ್ವವನ್ನು ಗುತ್ತಿಗೆ ಪಡೆದುಕೊಂಡಂತೆ ವರ್ತಿಸುವ ಬಿಜೆಪಿ ಪಕ್ಷ ಹಾಗೂ ಹಿಂದೂ ಸಂಘಟನೆಗಳು ಯಾಕೆ ಈಗ ಮೌನವಾಗಿದ್ದಾರೆ? ಏನೇ ಘಟನೆಗಳು ನಡೆದರೂ ತಕ್ಷಣ ಟ್ವೀಟ್‌ ಮೂಲಕ ಪ್ರತಿಕ್ರಿಯಿಸುವ ಮೋದಿ ಅವರು ತಿರುಪತಿಯ ಲಡ್ಡು ವಿವಾದದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಇದು ಸಂಶಯಕ್ಕೆ ಕಾರಣವಾಗುತ್ತಿದೆ ಎಂದು ಕಾಂಚನ್ ಹೇಳಿದ್ದಾರೆ.ಬಿಜೆಪಿ, ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿತು ಅನ್ನೋ ಹಾಗೆ ತಮ್ಮದೇ ಮಿತ್ರಪಕ್ಷದ ಸರ್ಕಾರ ಅಧಿಕಾರದಲ್ಲಿದ್ದಾಗ ನಡೆದ ಹಗರಣಕ್ಕೆ ಕಾಂಗ್ರೆಸ್ ಪಕ್ಷದ ಹೆಸರನ್ನು ಸೇರಿಸಲು ಹೊರಟಿದೆ. ಆದ್ದರಿಂದ ಬಿಜೆಪಿ ಮೊದಲು ಸೂಕ್ತ ತನಿಖೆ ನಡೆಸಲಿ ಎಂದು ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.