ಸಾರಾಂಶ
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಮೂಹದ 6 ಅಂಶಗಳ ಸಮಸ್ಯೆ ಕುರಿತು ಜಾಗೃತಿ ಮೂಡಿಸುವ ಯುವ ಸ್ಪಂದನ ಅರಿವು ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಮೂಹದ 6 ಅಂಶಗಳ ಸಮಸ್ಯೆ ಕುರಿತು ಜಾಗೃತಿ ಮೂಡಿಸುವ ಯುವ ಸ್ಪಂದನ ಅರಿವು ಕಾರ್ಯಕ್ರಮವು ತಿತಿಮತಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಯಿತು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬೆಂಗಳೂರಿನ ನಿಮಾನ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ (ಎನ್. ಎಸ್. ಎಸ್.) ಸಹಯೋಗದಲ್ಲಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಪರಿವರ್ತಕರಾದ ಗಾಯತ್ರಿ ಮತ್ತು ಕೃತಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.ವಿದ್ಯಾರ್ಥಿಗಳು ಆರೋಗ್ಯ ಮತ್ತು ಜೀವನ ಶೈಲಿಯ ಸಕಾರಾತ್ಮಕ ಅಂಶಗಳನ್ನು ಈಗಿನಿಂದಲೇ ರೂಡಿಸಿಕೊಳ್ಳಬೇಕು. ಇದರಿಂದ ಮಾತ್ರ ವ್ಯಕ್ತಿತ್ವ ಬೆಳವಣಿಗೆ ಸಾಧ್ಯ ಎಂದು ಅವರು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಸುರಕ್ಷತೆ, ಲಿಂಗತ್ವ, ಲೈಂಗಿಕತೆ ಮೊದಲಾದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಅಲ್ಲದೆ ಇದೇ ವಿಷಯಗಳ ಕುರಿತು ಪರಿವರ್ತಕರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ತಿತಿಮತಿ ಪದವಿಪೂರ್ವ ಕಾಲೇಜಿನ ಪ್ರಾಶುಪಾಲರಾದ ಆರ್. ವಿನೋದ್ ಕುಮಾರ್, ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಎ ಪಿ ಮಂಗಳ, ಶಾಲೆಯ ದೈಹಿಕ ಶಿಕ್ಷಕರಾದ ಸಿ.ಎಂ. ರಾಘವೇಂದ್ರ ಸೇರಿದಂತೆ ಉಪನ್ಯಾಸಕರು ಸಹ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.