ರಾಜ್ಯ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಫೆ. 14ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದು, ಅಂದು ಅವಳಿ ತಾಲೂಕಿನ ಸುಮಾರು 7 ಸಾವಿರ ಫಲಾನುಭವಿಗಳಿಗೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮನೆಗಳ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ರಟ್ಟೀಹಳ್ಳಿ: ರಾಜ್ಯ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಫೆ. 14ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದು, ಅಂದು ಅವಳಿ ತಾಲೂಕಿನ ಸುಮಾರು 7 ಸಾವಿರ ಫಲಾನುಭವಿಗಳಿಗೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮನೆಗಳ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಪಟ್ಟಣದ ಕೃಷಿ ಇಲಾಖೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ, ದೀನ-ದಲಿತರ ಪರ, ಬಡವರ ಪರ, ಸಮಾಜಮುಖಿ ಸರ್ಕಾರ ಹಾಗೂ ಸಾರ್ಥಕ ಆಡಳಿತ ನೀಡಿದ ಹಿನ್ನೆಲೆಯಲ್ಲಿ ಫೆ. 14ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಿದ್ಧತೆ ಭರದಿಂದ ನಡೆಯುತ್ತಿದೆ. ರಟ್ಟೀಹಳ್ಳಿ, ಹಿರೇಕೆರೂರು ತಾಲೂಕಿನ ಪಕ್ಷದ ಮುಖಂಡರು, ಹಿತೈಷಿಗಳು ಸೇರಿದಂತೆ 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದಾರೆ. ಅಂದು ಸುಮಾರು 40 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸರ್ಕಾರಿ ಜಾಗದಲ್ಲಿ ಸ್ವಂತ ಹಾಗೂ ಖಾಸಗಿ ಜಾಗದಲ್ಲಿ ಮನೆ ಕಟ್ಟಿಕೊಂಡ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ, ಪೋತಿ ಖಾತೆ, ಪೋಡಿ ಮುಕ್ತ ದಾಖಲಾತಿ ಹಾಗೂ ಇನ್ನೂ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೋಳ್ಳಲಾಗಿದೆ. ಈ ಹಿಂದೆ ವಿಜಯಪುರದಲ್ಲಿ ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿತ್ತು. ಎರಡನೇ ಬಾರಿ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಎರಡು ತಾಲೂಕಿನ ಮತದಾರ ಬಂಧುಗಳು, ಪಕ್ಷದ ಹಿತೈಷಿಗಳು ಹಾಗೂ ಫಲಾನುಭವಿಗಳು ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ತಹಸೀಲ್ದಾರ್ ಶ್ವೇತಾ ಅಮರಾವತಿ, ಎಂ. ರೇಣುಕಾ, ತಾಪಂ ಇಒ ಎನ್. ರವಿಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ, ತಾಪಂ ಮಾಜಿ ಅಧ್ಯಕ್ಷ ಮಹೇಶ ಗುಬ್ಬಿ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.