ರೇಡಿಯೋ ದಲ್ಲಿ ರಾಜರ ಕಥೆಗಳು ಪ್ರಸಾರಕ್ಕೆ ನಿರ್ಬಂಧನೆ ವಿಧಿಸಲು ಆಗ್ರಹ

| Published : Mar 26 2024, 01:00 AM IST

ರೇಡಿಯೋ ದಲ್ಲಿ ರಾಜರ ಕಥೆಗಳು ಪ್ರಸಾರಕ್ಕೆ ನಿರ್ಬಂಧನೆ ವಿಧಿಸಲು ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ ನಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮಾತನಾಡಿರುವುದು ಪ್ರಸಾರವಾಗುತ್ತಿದೆ. ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ

ಕನ್ನಡಪ್ರಭ ವಾರ್ತೆ ಮೈಸೂರು104.8 ರೇಡಿಯೋ ಮಿರ್ಚ್ ಚಾನೆಲ್ ನಲ್ಲಿ ರಾಜರ ಬಾಯಿಂದ ರಾಜರ ಕಥೆಗಳು ಪ್ರಸಾರವಾಗುವ ಕಾರ್ಯಕ್ರಮಕ್ಕೆ ನಿರ್ಬಂಧನೆ ವಿಧಿಸುವಂತೆ ಕೆಪಿಸಿಸಿ ವಕ್ತಾರ ಹಾಗೂ ಮೈಲ್ಯಾಕ್ ಮಾಜಿ ಅಧ್ಯಕ್ಷ ಎಚ್.ಎ. ವೆಂಕಟೇಶ್ ಅವರು ಕರ್ನಾಟಕ ಚುನಾವಣಾ ಆಯೋಗದ ಚುನಾವಣಾ ಆಯುಕ್ತರನ್ನು ಆಗ್ರಹಿಸಿದ್ದಾರೆ.

ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ ನಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮಾತನಾಡಿರುವುದು ಪ್ರಸಾರವಾಗುತ್ತಿದೆ. ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.